ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನಹಾನಿ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ತಡೆ

2019ರ ಲೋಕಸಭಾ ಚುನಾವಣೆಗೂ ಮುನ್ನ ಚೈಬಾಸಾದಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಭಾಷಣ ಮಾಡಿದ್ದ ರಾಹುಲ್ ಗಾಂಧಿ, ಅಮಿತ್ ಶಾ ಅವರನ್ನು 'ಕೊಲೆಗಾರ' ಎಂದು ಉಲ್ಲೇಖಿಸಿದ್ದರು.
Rahul Gandhi
ರಾಹುಲ್ ಗಾಂಧಿ
Updated on

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.

ಬಿಜೆಪಿ ಕಾರ್ಯಕರ್ತ ನವೀನ್ ಝಾ ಅವರು 2019ರಲ್ಲಿ ಅಮಿತ್ ಶಾ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದರು.

2019ರ ಲೋಕಸಭಾ ಚುನಾವಣೆಗೂ ಮುನ್ನ ಚೈಬಾಸಾದಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಭಾಷಣ ಮಾಡಿದ್ದ ರಾಹುಲ್ ಗಾಂಧಿ, ಅಮಿತ್ ಶಾ ಅವರನ್ನು 'ಕೊಲೆಗಾರ' ಎಂದು ಉಲ್ಲೇಖಿಸಿದ್ದರು.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು, ಜಾರ್ಖಂಡ್ ಸರ್ಕಾರ ಮತ್ತು ಬಿಜೆಪಿ ನಾಯಕನಿಗೆ ನೋಟಿಸ್ ಜಾರಿ ಮಾಡಿದ್ದು, ರಾಹುಲ್ ಗಾಂಧಿಯವರ ಮೇಲ್ಮನವಿಯ ಬಗ್ಗೆ ಪ್ರತಿಕ್ರಿಯೆ ಕೇಳಿದೆ.

Rahul Gandhi
ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನಹಾನಿ ಪ್ರಕರಣಕ್ಕೆ ಹೈಕೋರ್ಟ್ ತಡೆ

ದೂರಿಗೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದಲ್ಲಿ ತಮ್ಮ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿದ್ದ ಅರ್ಜಿಯನ್ನು ತಿರಸ್ಕರಿಸಿದ ಜಾರ್ಖಂಡ್ ಹೈಕೋರ್ಟ್ ಆದೇಶವನ್ನು ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com