ಆರ್ ಜಿ ಕರ್ ವೈದ್ಯೆ ಅತ್ಯಾಚಾರ, ಕೊಲೆ: ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ ಪ್ರಕಟ

ಕಳೆದ ವರ್ಷ ಆಗಸ್ಟ್ 9 ರಂದು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಪ್ರಕರಣದಲ್ಲಿ ರಾಯ್ ತಪ್ಪಿತಸ್ಥ ಎಂದು ಸೀಲ್ಡಾದಲ್ಲಿರುವ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ಕಳೆದ ಶನಿವಾರ ಘೋಷಿಸಿದ್ದರು.
Sanjay Roy convict
ಅಪರಾಧಿ ಸಂಜಯ್ ರಾಯ್
Updated on

ಕೋಲ್ಕತ್ತಾ: ಸರ್ಕಾರಿ ಸ್ವಾಮ್ಯದ ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ಕಿರಿಯ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪದಲ್ಲಿ ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ ನೀಡಿ ನ್ಯಾಯಾಲಯ ಆದೇಶ ಪ್ರಕಟಿಸಿದೆ.

ಆರ್‌ಜಿ ಕರ್ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ ಪಶ್ಚಿಮ ಬಂಗಾಳದ ಸೀಲ್ಡಾ ನ್ಯಾಯಾಲಯ, 50,000 ರೂಪಾಯಿ ದಂಡವನ್ನೂ ವಿಧಿಸಿದೆ.

ಕಳೆದ ವರ್ಷ ಆಗಸ್ಟ್ 9 ರಂದು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಪ್ರಕರಣದಲ್ಲಿ ರಾಯ್ ತಪ್ಪಿತಸ್ಥ ಎಂದು ಸೀಲ್ಡಾದಲ್ಲಿರುವ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ಕಳೆದ ಶನಿವಾರ ಘೋಷಿಸಿದ್ದರು.

ಈ ಕೃತ್ಯವು ದೇಶಾದ್ಯಂತ ಭಾರೀ ಪ್ರತಿಭಟನೆ ಮತ್ತು ಆಕ್ರೋಶಕ್ಕೆ ಕಾರಣವಾಗಿತ್ತು. ಕಳೆದ ವರ್ಷ ಆಗಸ್ಟ್ 9ರಂದು 31 ವರ್ಷದ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಕೋಣೆಯಲ್ಲಿ ಪತ್ತೆಯಾದ ನಂತರ ಆಗಸ್ಟ್ 10 ರಂದು ಕೋಲ್ಕತ್ತಾ ಪೊಲೀಸರ ಮಾಜಿ ನಾಗರಿಕ ಸ್ವಯಂಸೇವಕ ಸಂಜಯ್ ರಾಯ್ ನನ್ನು ಬಂಧಿಸಲಾಗಿತ್ತು.

Sanjay Roy convict
ಕೋಲ್ಕತ್ತಾ ವೈದ್ಯೆ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ: 57 ದಿನಗಳಲ್ಲೇ ತೀರ್ಪು ಪ್ರಕಟ; ಸಂಜಯ್ ರಾಯ್ ದೋಷಿ

ವೈದ್ಯೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕತ್ತು ಹಿಸುಕಿ ಕೊಂದು ಹಾಕಿದ ಆರೋಪದಲ್ಲಿ ರಾಯ್ ತಪ್ಪಿತಸ್ಥನೆಂದು ಕಂಡುಬಂದಿದ್ದು, ನ್ಯಾಯಾಧೀಶರು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ನ ಸೆಕ್ಷನ್ 64, 66 ಮತ್ತು 103(1) ರ ಅಡಿಯಲ್ಲಿ ದೋಷಿ ಎಂದು ತೀರ್ಪು ನೀಡಿದ್ದಾರೆ.

ಸಂಜಯ್ ರಾಯ್ ಜೀವಾವಧಿ ಶಿಕ್ಷೆಗೆ ಗುರಿಯಾದ ನಂತರ, ಸಾವಿಗೀಡಾದ ವೈದ್ಯೆ ಕುಟುಂಬಕ್ಕೆ ಪಶ್ಚಿಮ ಬಂಗಾಳ ರಾಜ್ಯ ಸರ್ಕಾರ 17 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ಕೂಡ ನ್ಯಾಯಾಲಯ ಆದೇಶಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com