
ಪಾಟ್ನಾ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತನ್ನ ಒಂದು ಲೋಟ ಹಾಲು ಕೆಳಗೆ ಬೀಳುವಂತೆ ಮಾಡಿದ್ದಾರೆ. ಇದರಿಂದ ನನಗೆ ₹ 250 ನಷ್ಟವಾಗಿದೆ ಎಂದು ಆರೋಪಿಸಿ ಬಿಹಾರದ ನಿವಾಸಿಯೊಬ್ಬರು ಸ್ಥಳೀಯ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿರುವ ವಿಲಕ್ಷಣ ಘಟನೆ ವರದಿಯಾಗಿದೆ.
ಸಮಸ್ತಿಪುರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಕಳೆದ ವಾರ ರಾಹುಲ್ ಗಾಂಧಿಯವರ ''ಇಂಡಿಯನ್ ಸ್ಟೇಟ್' ವಿರುದ್ಧ ಹೋರಾಟ" ಎಂಬ ಹೇಳಿಕೆಯನ್ನು ಕೇಳಿ ಆಘಾತವಾಯಿತು ಎಂದು ದೂರುದಾರ ಮುಖೇಶ್ ಚೌಧರಿ ಹೇಳಿದ್ದಾರೆ.
'ರಾಹುಲ್ ಅವರ ಹೇಳಿಕೆಯನ್ನು ಕೇಳಿ ನಾನು ಆಘಾತದ ಸ್ಥಿತಿಯಲ್ಲಿದ್ದಾಗ ನನ್ನ ಕೈಯಲ್ಲಿದ್ದ 5 ಲೀಟರ್ ಹಾಲು ತುಂಬಿದ್ದ ಬಕೆಟ್ ಕೆಳಗೆ ಬಿತ್ತು. ಪ್ರತಿ ಲೀಟರ್ ಹಾಲಿಗೆ 50 ರೂ. ಬೆಲೆಯಿದೆ. ರಾಹುಲ್ ಗಾಂಧಿ ರಾಷ್ಟ್ರದ ಸಾರ್ವಭೌಮತೆಗೆ ಧಕ್ಕೆ ತರುತ್ತಿದ್ದಾರೆ' ಎಂದು ಚೌಧರಿ ಆರೋಪಿಸಿದ್ದಾರೆ.
ಸೋನುಪುರ್ ಗ್ರಾಮದ ನಿವಾಸಿಯಾಗಿರುವ ಚೌಧರಿ ಅವರು, ರೋಸೆರಾ ಉಪವಿಭಾಗದ ಸಿವಿಲ್ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಮಾಧ್ಯಮಗಳಿಗೆ ತೋರಿಸಿದರು. ದೇಶದ್ರೋಹಕ್ಕೆ ಸಂಬಂಧಿಸಿದ 152 ಸೇರಿದಂತೆ ವಿವಿಧ BNS ಸೆಕ್ಷನ್‌ಗಳ ಅಡಿಯಲ್ಲಿ ರಾಹುಲ್ ಗಾಂಧಿಯನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಅರ್ಜಿಯನ್ನು ನ್ಯಾಯಾಲಯ ಅಂಗೀಕರಿಸಿದೆಯೇ ಎಂಬುದು ತಿಳಿದಿಲ್ಲ.
Advertisement