ನಾಲ್ಕು ವರ್ಷಗಳಿಂದ ಪಂಚಾಯಿತಿ ಸಮಿತಿ ಸಭೆಗಳಿಗೆ ಗೈರು; ಹಮೀರ್‌ಪುರದ ಪಿಡಬ್ಲ್ಯುಡಿ ಅಧಿಕಾರಿಗೆ 5 ರೂ ದಂಡ!

ಹರೀಶ್ ಶರ್ಮಾ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಹಮೀರ್‌ಪುರ ಪಂಚಾಯಿತಿ ಸಮಿತಿಯ ತ್ರೈಮಾಸಿಕ ಸಭೆ ನಡೆಯಿತು.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on

ಹಮೀರ್‌ಪುರ: ಇಲ್ಲಿನ ತೌಣಿದೇವಿ ಮಂಡಲದ ಲೋಕೋಪಯೋಗಿ ಇಲಾಖೆ ಅಧಿಕಾರಿಯೊಬ್ಬರು ಸತತ ನಾಲ್ಕು ವರ್ಷಗಳಿಂದ ಪಂಚಾಯಿತಿ ಸಮಿತಿ ಸಭೆಗಳಿಗೆ ಹಾಜರಾಗದ ಕಾರಣಕ್ಕೆ ದಂಡ ವಿಧಿಸಲಾಗಿದೆ. ದಂಡದ ಮೊತ್ತ ಕೇಳಿದ್ರೆ ಶಾಕ್ ಆಗ್ತೀರ. ಅದು ಕೇವಲ ಐದು ರೂಪಾಯಿ.

ಹಮೀರ್‌ಪುರದ ಪಂಚಾಯಿತಿ ಸಮಿತಿಯ ತ್ರೈಮಾಸಿಕ ಸಭೆಯಲ್ಲಿ ತೌಣಿದೇವಿ ಮಂಡಲದ ಪಿಡಬ್ಲ್ಯುಡಿ ಅಧಿಕಾರಿಗೆ 5 ರೂ. ದಂಡ ವಿಧಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಹರೀಶ್ ಶರ್ಮಾ ಮಂಗಳವಾರ ತಿಳಿಸಿದ್ದಾರೆ.

ಹರೀಶ್ ಶರ್ಮಾ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಹಮೀರ್‌ಪುರ ಪಂಚಾಯಿತಿ ಸಮಿತಿಯ ತ್ರೈಮಾಸಿಕ ಸಭೆ ನಡೆಯಿತು. ಸಭೆಯಲ್ಲಿ 15ನೇ ಹಣಕಾಸು ಆಯೋಗದ ಬಜೆಟ್ ಹಾಗೂ ಅಭಿವೃದ್ಧಿ ಕಾಮಗಾರಿಗಳ ಹೊಸ ರೂಪುರೇಷೆ ಸಿದ್ಧಪಡಿಸುವ ಕುರಿತು ಚರ್ಚೆ ನಡೆಸಲಾಯಿತು.

ಹಲವು ಬಾರಿ ಎಚ್ಚರಿಕೆ ನೀಡಿದರೂ ತೌಣಿದೇವಿ ಮಂಡಲದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸಭೆಗೆ ಗೈರಾಗಿದ್ದಾರೆ. ಇದರಿಂದ ಇಲಾಖಾ ಅಭಿವೃದ್ದಿ ಕಾಮಗಾರಿಗೆ ತೊಂದರೆಯಾಗುತ್ತಿದ್ದು, ಎಲ್ಲ ಸದಸ್ಯರ ಒಪ್ಪಿಗೆ ಮೇರೆಗೆ ನಿರ್ಣಯ ಕೈಗೊಂಡು 5 ರೂ. ದಂಡ ವಿಧಿಸಲಾಗಿದೆ ಎಂದು ಬಿಡಿಸಿಸಿ ಅಧ್ಯಕ್ಷ ಹರೀಶ್‌ ಶರ್ಮಾ ತಿಳಿಸಿದ್ದಾರೆ.

ಆದರೆ, ಸಭೆಯ ಬಗ್ಗೆ ಮಾಹಿತಿ ಇರಲಿಲ್ಲ ಎಂದು ಪಿಡಬ್ಲ್ಯುಡಿ ಕಾರ್ಯಪಾಲಕ ಅಭಿಯಂತರ ದೇವರಾಜ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com