
ಮುಂಬೈ: ಬಾಂದ್ರಾದಲ್ಲಿರುವ ತಮ್ಮ ಮನೆಯಲ್ಲಿ ದರೋಡೆಕೋರನಿಂದ ಚಾಕು ದಾಳಿಗೆ ಒಳಗಾಗಿದ್ದ ನಟ ಸೈಫ್ ಅಲಿ ಖಾನ್ ಅವರು ಮಂಗಳವಾರ ಲೀಲಾವತಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಜನವರಿ 16 ರಂದು ಕಳ್ಳತನ ಮಾಡುವ ಉದ್ದೇಶದಿಂದ ನಟ ಸೈಫ್ ಅಲಿ ಖಾನ್ ಅವರ ನಿವಾಸಕ್ಕೆ ನುಗ್ಗಿದ್ದ ದುಷ್ಕರ್ಮಿ, ನಟನಿಗೆ ಚಾಕುವಿನಿಂದ ಆರು ಬಾರಿ ಇರಿದಿದ್ದನು. ಗಂಭೀರವಾಗಿ ಗಾಯಗೊಂಡಿದ್ದ 54 ವರ್ಷದ ಸೈಫ್ ಅಲಿ ಖಾನ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಖಾನ್ ಅವರ ಕೈ, ಕುತ್ತಿಗೆ ಮತ್ತು ಬೆನ್ನಿಗೆ ಗಂಭೀರ ಗಾಯಗಳಾಗಿದ್ದವು. ವೈದ್ಯರು ಬೆನ್ನುಮೂಳೆಯಲ್ಲಿ ಸಿಲುಕಿದ್ದ ಚೂಪಾದ ಚಾಕುವನ್ನು ಹೊರ ತೆಗೆದಿದ್ದು, ಜನವರಿ 17 ರಂದು ತೀವ್ರ ನಿಗಾ ಘಟಕದಿಂದ(ಐಸಿಯು) ವಿಶೇಷ ಕೋಣೆಗೆ ಸ್ಥಳಾಂತರಿಸಲಾಗಿತ್ತು.
ಐದು ದಿನಗಳ ನಂತರ ಸೈಫ್ ಅಲಿ ಖಾನ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ.
ಇರಿತದ ಘಟನೆಗೆ ಸಂಬಂಧಿಸಿದಂತೆ ನೆರೆಯ ಥಾಣೆ ನಗರದ ಬಾಂಗ್ಲಾದೇಶಿ ಪ್ರಜೆ ಶರೀಫುಲ್ ಇಸ್ಲಾಂ ಶೆಹಜಾದ್ ಮೊಹಮ್ಮದ್ ರೋಹಿಲ್ಲಾ ಅಮೀನ್ ಫಕೀರ್(30) ಎಂಬ ಆರೋಪಿಯನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ.
Advertisement