ಜಲಂಗಾವ್ ರೈಲು ದುರಂತ: ಮೃತ ಪ್ರಯಾಣಿಕರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ: ಸಿಎಂ ಫಡ್ನವೀಸ್ ಘೋಷಣೆ

ಉತ್ತರ ಮಹಾರಾಷ್ಟ್ರ ಜಿಲ್ಲೆಯಲ್ಲಿ ಸಂಜೆ ಬೆಂಕಿಯ ಭೀತಿಯಿಂದ ರೈಲಿನಿಂದ ಇಳಿದು ಹಳಿಗಳ ಮೇಲೆ ನಿಂತಿದ್ದ ಪ್ರಯಾಣಿಕರ ಮೇಲೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮತ್ತೊಂದು ರೈಲು ಡಿಕ್ಕಿ ಹೊಡೆದು ಕನಿಷ್ಠ 12 ಜನ ಸಾವನ್ನಪ್ಪಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Maharashtra CM Fadnavis
ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, ರೈಲು ದುರಂತಕ್ಕೀಡಾದ ಸ್ಥಳ
Updated on

ಮುಂಬೈ: ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ದುರಂತದಲ್ಲಿ ಸಾವನ್ನಪ್ಪಿದ ಪ್ರಯಾಣಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಆರ್ಥಿಕ ನೆರವನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಬುಧವಾರ ಘೋಷಿಸಿದ್ದಾರೆ.

ಉತ್ತರ ಮಹಾರಾಷ್ಟ್ರ ಜಿಲ್ಲೆಯಲ್ಲಿ ಸಂಜೆ ಬೆಂಕಿಯ ಭೀತಿಯಿಂದ ರೈಲಿನಿಂದ ಇಳಿದು ಹಳಿಗಳ ಮೇಲೆ ನಿಂತಿದ್ದ ಪ್ರಯಾಣಿಕರ ಮೇಲೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮತ್ತೊಂದು ರೈಲು ಡಿಕ್ಕಿ ಹೊಡೆದು ಕನಿಷ್ಠ 12 ಜನ ಸಾವನ್ನಪ್ಪಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈನಿಂದ 400 ಕಿ.ಮೀ ದೂರದಲ್ಲಿರುವ ಪಚೋರಾ ಬಳಿಯ ಮಹೇಜಿ ಮತ್ತು ಪರ್ಧಾಡೆ ನಿಲ್ದಾಣಗಳ ನಡುವೆ ಈ ಅಪಘಾತ ಸಂಭವಿಸಿದೆ. ಸಂಜೆ 5 ಗಂಟೆ ಸುಮಾರಿಗೆ ಯಾರೋ ಚೈನ್ ಎಳೆದು ​​ಲಕ್ನೋ-ಮುಂಬೈ ಪುಷ್ಪಕ್ ಎಕ್ಸ್‌ಪ್ರೆಸ್ ನ್ನು ನಿಲ್ಲಿಸಲಾಯಿತು ಎಂದು ಕೇಂದ್ರ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ದುರಂತ ಕುರಿತು ಸ್ವಿಟ್ಜರ್ಲೆಂಡ್‌ನ ದಾವೋಸ್‌ನಿಂದ ಫಡ್ನವಿಸ್ ನೀಡಿರುವ ವಿಡಿಯೋ ಸಂದೇಶದಲ್ಲಿ, ರೈಲಿನಿಂದ ಹೊಗೆ ಬರುತ್ತಿದೆ ಎಂದು ತಪ್ಪಾಗಿ ಭಾವಿಸಿ ರೈಲಿನಲ್ಲಿದ್ದ ಕೆಲವು ಪ್ರಯಾಣಿಕರು ಜಿಗಿದಿದ್ದಾರೆ. ದುರದೃಷ್ಟವಶಾತ್, ಅವರು ಮತ್ತೊಂದು ರೈಲಿಗೆ ಸಿಲುಕಿದ್ದಾರೆ. ದುರಂತದಲ್ಲಿ ಮೃತಪಟ್ಟ ಕುಟುಂಬದವರಿಗೆ ತಲಾ 5 ಲಕ್ಷ ರೂಪಾಯಿ ಘೋಷಿಸುತ್ತೇನೆ. ಗಾಯಗೊಂಡ ಪ್ರಯಾಣಿಕರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಹೇಳಿದ್ದಾರೆ.

Maharashtra CM Fadnavis
ರೈಲಿನಲ್ಲಿ ಬೆಂಕಿ ವದಂತಿ: ಇಳಿದು ಪಕ್ಕದ ಹಳಿಗೆ ಹೋದವರ ಮೇಲೆ ಹರಿದ ಮತ್ತೊಂದು ರೈಲು; 12 ಮಂದಿ ಸಾವು! Video

12 ಮೃತದೇಹಗಳನ್ನು ಜಲಗಾಂವ್‌ನ ಸಮೀಪದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಆರರಿಂದ ಏಳು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವಿಶೇಷ ಪೊಲೀಸ್ ಮಹಾನಿರೀಕ್ಷಕ ದತ್ತಾತ್ರಯ ಕರಾಳೆ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಸಚಿವ ಗಿರೀಶ್ ಮಹಾಜನ್ ಅವರು ವೈಯಕ್ತಿಕವಾಗಿ ರಕ್ಷಣಾ ಕಾರ್ಯಾಚರಣೆ ನೋಡಿಕೊಳ್ಳುತ್ತಿದ್ದು, ಜಲಗಾಂವ್ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ಘಟನೆ ಕುರಿತು ಮಾತನಾಡಿದ್ದು, ಮಾಹಿತಿ ಪಡೆದಿರುವುದಾಗಿ ಎಂದು ಫಡ್ನವೀಸ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com