ಅಧಿಕಾರಕ್ಕೇರಿದ ಐದು ವರ್ಷಗಳಲ್ಲಿ ದೆಹಲಿ ನಿರುದ್ಯೋಗ ಮುಕ್ತ: ಅರವಿಂದ ಕೇಜ್ರಿವಾಲ್ ಭರವಸೆ

ಪಂಜಾಬ್‌ನ ಎಎಪಿ ಸರ್ಕಾರವು ಅಧಿಕಾರಕ್ಕೆ ಬಂದ ಎರಡು ವರ್ಷಗಳೊಳಗೆ ಯುವಜನತೆಗೆ 48,000 ಸರ್ಕಾರಿ ಉದ್ಯೋಗಗಳನ್ನು ಒದಗಿಸಿದೆ ಮತ್ತು ಮೂರು ಲಕ್ಷಕ್ಕೂ ಹೆಚ್ಚು ಖಾಸಗಿ ವಲಯದ ಉದ್ಯೋಗಗಳನ್ನು ಒದಗಿಸಿದೆ ಎಂದು ಕೇಜ್ರಿವಾಲ್ ಹೇಳಿದರು.
ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್
ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್
Updated on

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಕಾಂಗ್ರೆಸ್, ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷಗಳು ವಿವಿಧ ಭರವಸೆಗಳನ್ನು ನೀಡುವ ಮೂಲಕ ಮತದಾರರ ಮನಸ್ಸು ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಇದೇ ವೇಳೆ, ಮುಂದಿನ ಐದು ವರ್ಷಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ನಿರುದ್ಯೋಗವನ್ನು ತೊಡೆದುಹಾಕುವುದಾಗಿ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಗುರುವಾರ ಭರವಸೆ ನೀಡಿದ್ದಾರೆ.

ವಿಡಿಯೋ ಸಂದೇಶ ನೀಡಿರುವ ಅವರು, 'ದೆಹಲಿಯ ಯುವಕರಿಗೆ ಉದ್ಯೋಗವನ್ನು ಒದಗಿಸುವುದು ನನ್ನ ಮುಂದಿರುವ ಪ್ರಮುಖ ಆದ್ಯತೆಯಾಗಿದೆ. ರಾಷ್ಟ್ರ ರಾಜಧಾನಿಯಲ್ಲಿನ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಲು ನಮ್ಮ ತಂಡವು ವಿವರವಾದ ಯೋಜನೆಯನ್ನು ರೂಪಿಸುತ್ತಿದೆ' ಎಂದರು.

ತಮ್ಮ ಸರ್ಕಾರದ ದಾಖಲೆಗಳ ಕುರಿತು ಮಾತನಾಡಿರುವ ಕೇಜ್ರಿವಾಲ್, ಪಂಜಾಬ್‌ನ ಎಎಪಿ ಸರ್ಕಾರವು ಅಧಿಕಾರಕ್ಕೆ ಬಂದ ಎರಡು ವರ್ಷಗಳೊಳಗೆ ಯುವಜನತೆಗೆ 48,000 ಸರ್ಕಾರಿ ಉದ್ಯೋಗಗಳನ್ನು ಒದಗಿಸಿದೆ ಮತ್ತು ಮೂರು ಲಕ್ಷಕ್ಕೂ ಹೆಚ್ಚು ಖಾಸಗಿ ವಲಯದ ಉದ್ಯೋಗಗಳನ್ನು ಒದಗಿಸಿದೆ ಎಂದು ಹೇಳಿದರು.

'ಉದ್ಯೋಗವನ್ನು ಹೇಗೆ ಸೃಷ್ಟಿಸಬೇಕೆಂದು ನಮಗೆ ತಿಳಿದಿದೆ ಮತ್ತು ನಮ್ಮ ಉದ್ದೇಶಗಳು ಪ್ರಾಮಾಣಿಕವಾಗಿವೆ. ಜನರ ಬೆಂಬಲದೊಂದಿಗೆ ನಾವು ಮುಂದಿನ ಐದು ವರ್ಷಗಳಲ್ಲಿ ದೆಹಲಿಯಿಂದ ನಿರುದ್ಯೋಗವನ್ನು ತೊಡೆದುಹಾಕುತ್ತೇವೆ' ಎಂದರು.

ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್
ದೇಶದ ಮುಂದಿನ ಬಜೆಟ್ ಅನ್ನು ಮಧ್ಯಮ ವರ್ಗಕ್ಕೆ ಮೀಸಲಿಡಿ: ಕೇಂದ್ರಕ್ಕೆ ಕೇಜ್ರಿವಾಲ್ ಆಗ್ರಹ

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5 ರಂದು ಮತದಾನ ನಡೆಯಲಿದ್ದು, ಫೆಬ್ರುವರಿ 8 ರಂದು ಫಲಿತಾಂಶ ಪ್ರಕಟವಾಗಲಿದೆ.

ದೆಹಲಿಯಲ್ಲಿ ಎಎಪಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೇರುವ ನಿರೀಕ್ಷೆಯಲ್ಲಿದೆ. ಆದರೆ, ಬಿಜೆಪಿ ಕಠಿಣ ಸ್ಪರ್ಧೆಯನ್ನು ಒಡ್ಡುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಕೂಡ ಅಧಿಕಾರಕ್ಕೇರುವ ಕಸರತ್ತು ನಡೆಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com