
ಮುಂಬೈ: 20 ವರ್ಷದ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ಖಾಸಗಿ ಭಾಗಕ್ಕೆ ಸರ್ಜಿಕಲ್ ಬ್ಲೇಡ್ ಮತ್ತು ಕಲ್ಲುಗಳು ಸೇರಿದಂತೆ ಇತರೆ ವಸ್ತುಗಳನ್ನು ಹಾಕಿ ವಿಕೃತಿ ಮೆರಿದಿರುವ ಘಟನೆಯೊಂದು ವಾಣಿಜ್ಯ ನಗರಿ ಮುಂಬೈನ ವಸಾಯಿಯಲ್ಲಿ ವರದಿಯಾಗಿದೆ.
ಆರೋಪಿ ಮೊದಲು ಯುವತಿ ಮೇಲೆ ಹಲ್ಲೆ ನಡೆಸಿದ್ದಾನೆ. ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಆಟೋದಲ್ಲಿ ಕರೆ ತಂದು ರಾಮ ಮಂದಿರ ಬಳಿ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆಂದು ಪೊಲೀಸರು ಹೇಳಿದ್ದಾರೆ.
ಯುವತಿಯ ಕಂಡ ದಾರಿಹೋಕರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ನಡೆಸಿದ ವೈದ್ಯರು, ಖಾಸಗಿ ಭಾಗದಲ್ಲಿದ್ದ ವಸ್ತುಗಳನ್ನು ಹೊರತೆಗೆದು, ಚಿಕಿತ್ಸೆ ನೀಡಿದ್ದಾರೆ. ಇದೀಗ ಯುವತಿಯ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ತನಿಖೆ ಮುಂದುವರೆದಿದೆ ಎಂದು ಉಪ ಪೊಲೀಸ್ ಆಯುಕ್ತ (ಡಿಸಿಪಿ) ಸ್ಮಿತಾ ಪಾಟೀಲ್ ಅವರು ಹೇಳಿದ್ದಾರೆ.
Advertisement