ಬಿಹಾರ: ಸಿಗರೇಟ್ ಕೊಡಲು ನಿರಾಕರಿಸಿದ್ದಕ್ಕೆ 65 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ!

ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದವರನ್ನು ಬಂಧಿಸಲು ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
girl Sexually Assaulted
ಸಾಂದರ್ಭಿಕ ಚಿತ್ರ
Updated on

ಲಖಿಸರಾಯ್: ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿ ಸಿಗರೇಟ್ ಕೊಡಲು ನಿರಾಕರಿಸಿದ್ದಕ್ಕಾಗಿ 65 ವರ್ಷದ ಮಹಿಳೆಯ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದವರನ್ನು ಬಂಧಿಸಲು ಶೋಧ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

"ಬುಧವಾರ ಮತ್ತು ಗುರುವಾರ ಮಧ್ಯರಾತ್ರಿ ನವಾಬ್‌ಗಂಜ್ ಪ್ರದೇಶದ ಮಹಿಳೆಯ ಮನೆಗೆ ನಾಲ್ವರು ವ್ಯಕ್ತಿಗಳು ಸಿಗರೇಟ್ ಕೇಳಿಕೊಂಡು ಹೋದಾಗ ಈ ಘಟನೆ ನಡೆದಿದೆ. ಆಕೆ ಸಿಗರೇಟ್ ಕೊಡಲು ನಿರಾಕರಿಸಿದಾಗ, ಆಕೆಯನ್ನು ಹತ್ತಿರದ ಹೊಲಕ್ಕೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ" ಎಂದು ಎಸ್‌ಪಿ ಅಜಯ್ ಕುಮಾರ್ ಪಿಟಿಐಗೆ ತಿಳಿಸಿದ್ದಾರೆ.

girl Sexually Assaulted
ಮುಂಬೈ: ಯುವತಿ ಮೇಲೆ ಅತ್ಯಾಚಾರ, ಗುಪ್ತಾಂಗಕ್ಕೆ ಕಲ್ಲು, ಬ್ಲೇಡ್‌ ಹಾಕಿ ವಿಕೃತಿ!

"ಆಕೆಯ ಕುಟುಂಬ ಸದಸ್ಯರ ಹೇಳಿಕೆಯ ಆಧಾರದ ಮೇಲೆ, ತಕ್ಷಣವೇ ಪ್ರಕರಣ ದಾಖಲಿಸಿಕೊಂಡು, ಗುರುವಾರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಇಬ್ಬರಿಗಾಗಿ ಶೋಧ ನಡೆಯುತ್ತಿದೆ" ಎಂದು ಅವರು ಹೇಳಿದ್ದಾರೆ.

ವೃದ್ಧ ಮಹಿಳೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಮಾರ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com