ಆರೋಗ್ಯ ಸಚಿವಾಲಯದ ಅಧಿಕಾರಿ ಸೋಗಿನಲ್ಲಿ ಹಲವರಿಗೆ 15 ಕೋಟಿ ರೂ ವಂಚಿಸಿದ್ದ ಆರೋಪಿ ಬಂಧನ!

ಬಂಧಿತನನ್ನು 48 ವರ್ಷದ ಒಡಿಶಾ ನಿವಾಸಿ ಪ್ರಫುಲ್ಲ ಕುಮಾರ್ ನಾಯಕ್ ಎಂದು ಗುರುತಿಸಲಾಗಿದೆ.
ಬಂಧನ
ಬಂಧನ
Updated on

ನವದೆಹಲಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಧಿಕಾರಿಯಂತೆ ನಟಿಸಿ ಹಲವರಿಗೆ 15 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ದೆಹಲಿ ಪೊಲೀಸ್‌ನ ಆರ್ಥಿಕ ಅಪರಾಧ ವಿಭಾಗ (ಇಒಡಬ್ಲ್ಯು) ವ್ಯಕ್ತಿಯೊಬ್ಬನನ್ನು ಬಂಧಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಬಂಧಿತನನ್ನು 48 ವರ್ಷದ ಒಡಿಶಾ ನಿವಾಸಿ ಪ್ರಫುಲ್ಲ ಕುಮಾರ್ ನಾಯಕ್ ಎಂದು ಗುರುತಿಸಲಾಗಿದೆ.

2021ರ ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ವಿವಿಧ ರಾಜ್ಯಗಳ ನಡುವೆ ಕೋವಿಡ್ ಲಸಿಕೆಗಳನ್ನು ಸಾಗಿಸಲು ಕೆಲಸದ ಆದೇಶಗಳನ್ನು ನೀಡುವುದಾಗಿ ಸುಳ್ಳು ಭರವಸೆ ನೀಡಿ 4 ಕೋಟಿ ರೂಪಾಯಿ ವಂಚಿಸಿದ್ದಾನೆ ಎಂದು ಸುನಿಲ್ ಕೌಶಿಕ್ ಎಂಬ ವ್ಯಕ್ತಿ ದೂರು ದಾಖಲಿಸಿದ್ದಾರೆ. ಇದೇ ರೀತಿಯ ಇನ್ನೂ ನಾಲ್ಕು ದೂರುಗಳು ದಾಖಲಾಗಿವೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಮತ್ತು ಆರೋಪಿ 15 ಕೋಟಿ ರೂ.ಗೂ ಹೆಚ್ಚು ಹಣವನ್ನು ವಂಚಿಸಿದ್ದಾನೆ ಎಂದು ಹೆಚ್ಚುವರಿ ಪೊಲೀಸ್ ಕಮಿಷನರ್ (ಇಒಡಬ್ಲ್ಯು) ಅಮೃತ ಗುಗುಲೋತ್ ತಿಳಿಸಿದ್ದಾರೆ.

ಆರೋಪಿ ಮತ್ತು ಅವರ ಸಹಚರರು ದೂರುದಾರರನ್ನು ಸಂಪರ್ಕಿಸಿದ್ದಾರೆ ಮತ್ತು ವಿವಿಧ ರಾಜ್ಯಗಳಿಗೆ ಕೋವಿಡ್ ಲಸಿಕೆಗಳನ್ನು ಸಾಗಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಿಂದ ಕೆಲಸದ ಆದೇಶಗಳನ್ನು ನೀಡಲಾಗುತ್ತದೆ ಎಂದು ಹೇಳಿ ವಂಚಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವಾಲಯದ ಮುಖ್ಯ ಆರ್ಕೆಸ್ಟ್ರೇಟರ್ ಮತ್ತು ಇಬ್ಬರು ಎಂಟಿಎಸ್ ಸಿಬ್ಬಂದಿ ಸೇರಿದಂತೆ ಎಂಟು ಜನರನ್ನು 2022ರಲ್ಲಿ ಬಂಧಿಸಲಾಯಿತು. ಅಂದಿನಿಂದ ನಾಯಕ್ ತಲೆಮರೆಸಿಕೊಂಡಿದ್ದನು. ಆತನನ್ನು ಜನವರಿ 21 ರಂದು ಬಂಧಿಸಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com