
ಸೋನಿತ್‌ಪುರ: 76ನೇ ಗಣರಾಜ್ಯೋತ್ಸವ ಆಚರಣೆಗೆ ದೇಶಾದ್ಯಂತ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿರುವಂತೆಯೇ ಅಸ್ಸಾಂನಲ್ಲಿ ಭಾರಿ ಪ್ರಮಾಣದ ಸ್ಪೋಟಕ ಶನಿವಾರ ಪತ್ತೆಯಾಗಿದೆ. ಸೋನಿತ್‌ಪುರ ಜಿಲ್ಲೆಯಲ್ಲಿ ಕಾಡಿನಲ್ಲಿ ಅಡಗಿಸಿಟ್ಟಿದ್ದ ಸ್ಫೋಟಕಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶೋಧ ಕಾರ್ಯಾಚರಣೆಯ ಸಮಯದಲ್ಲಿ ಐದು ಗ್ರೆನೇಡ್‌ಗಳು, ಮೂರು ಡಿಟೋನೇಟರ್‌ಗಳು ಸೇರಿದಂತೆ ಪಾಲಿಥಿನ್ ಬ್ಯಾಗ್‌ನಲ್ಲಿ ಸುತ್ತಿಟ್ಟಿದ್ದ ಸ್ಫೋಟಕವನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಡಿರುವ ಸೋನಿತ್ ಪುರ ಪೊಲೀಸರು, ಇಂದು ಧೇಕಿಯಾಜುಲಿ ಪೊಲೀಸ್ ಠಾಣೆ ವ್ಯಾಪ್ತಿಯ ಬಟಾಶಿಪುರ್, ಖವ್ಬ್ರಾ ಗ್ರಾಮದ ಬಳಿಯ ಅರಣ್ಯದ ನಿರ್ಜನ ಪ್ರದೇಶದಲ್ಲಿ ಅಕ್ರಮ ಶಸಾಸ್ತ್ರ ಮತ್ತು ಮದ್ದುಗುಂಡುಗಳನ್ನು ಹೂತ್ತಿಟ್ಟಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಆಧಾರದ ಮೇಲೆ ಶೋಧ ಕಾರ್ಯಾಚರಣೆ ನಡೆಸಲಾಯಿತು.
ದೊರೆತ ಒಂದು ಗ್ರೇನೆಡ್ ಹಾನಿಯಾಗಿದ್ದು, ಸ್ಫೋಟಕ ನಿಷ್ಕ್ರೀಯಗೊಳಿಸಲು ಬಾಂಬ್ ನಿಷ್ಕ್ರೀಯ ದಳ ಸಂಪರ್ಕಿಸಲಾಗಿದೆ ಎಂದು ಹೇಳಿದ್ದಾರೆ.
ಈ ಮಧ್ಯೆ ಶಾಂತಿಯುತ ಮತ್ತು ಸುಗಮ ಗಣರಾಜ್ಯೋತ್ಸವಕ್ಕಾಗಿ ಅಸ್ಸಾಂನಾದ್ಯಂತ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದೆ. ನಿತ್ಯ ವಾಹನಗಳ ಶೋಧ ಹಾಗೂ ಗಸ್ತು ತಿರುಗುವ ಕಾರ್ಯವೂ ನಡೆಯುತ್ತಿದೆ. ಜಿಲ್ಲಾ ಪೊಲೀಸ್ ಮತ್ತು ರೈಲ್ವೆ ಪೊಲೀಸ್ ಪಡೆಗಳ ಸಮನ್ವಯದಲ್ಲಿ ರೈಲುಗಳು, ರೈಲ್ವೆ ಹಳಿಗಳು, ಸೇತುವೆಗಳು ಮತ್ತು ಪ್ರಯಾಣಿಕರ ವಸ್ತುಗಳ ತೀವ್ರ ತಪಾಸಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುವಾಹಟಿ ಸೇರಿದಂತೆ ಜಲಮಾರ್ಗಗಳಲ್ಲೂ ನಿಕಟ ನಿಗಾ ಇರಿಸಲಾಗಿದೆ. ಗಣರಾಜ್ಯೋತ್ಸವ ಸಮಾರಂಭ ನಡೆಯುವ ಸ್ಥಳಗಳಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಭಾನುವಾರ ಗುವಾಹಟಿಯಲ್ಲಿ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ದಿಬ್ರುಗಢದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲಿದ್ದು, ಸಚಿವರು ಮತ್ತು ಇತರ ಅಧಿಕೃತ ಗಣ್ಯರು ವಿವಿಧ ಸ್ಥಳಗಳಲ್ಲಿ ಆಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಳೆದ ವರ್ಷ ಸ್ವಾತಂತ್ರ್ಯ ದಿನದಂದು ಸರಣಿ ಸ್ಫೋಟ ನಡೆಸಲು ಅಸ್ಸಾಂನಾದ್ಯಂತ 24 ಸ್ಥಳಗಳಲ್ಲಿ ಬಾಂಬ್‌ಗಳನ್ನು ಇಟ್ಟಿರುವುದಾಗಿ ಉಗ್ರ ಸಂಘಟನೆ ಉಲ್ಫಾ (ಐ) ಹೇಳಿಕೆ ನೀಡುವ ಮೂಲಕ ರಾಜ್ಯ ಸರ್ಕಾರಕ್ಕೆ ಬೆದರಿಕೆ ಹಾಕಿದ್ದರು.
Advertisement