ಇಂಡೋನೇಷ್ಯಾ ಅಧ್ಯಕ್ಷ Prabowo Subianto- PM Modi ಭೇಟಿ; ರಕ್ಷಣಾ ಉತ್ಪಾದನೆಯಲ್ಲಿ ಮಹತ್ವದ ಗುರಿ!

ಉಭಯ ದೇಶಗಳು ಒಟ್ಟಾರೆ ದ್ವಿಪಕ್ಷೀಯ ಸಂಬಂಧಗಳಿಗೆ, ಪ್ರಮುಖವಾಗಿ ರಕ್ಷಣಾ ಉತ್ಪಾದನೆ ಮತ್ತು ಪೂರೈಕೆ ಸರಪಳಿಗಳ ಕ್ಷೇತ್ರದಲ್ಲಿನ ಒಪ್ಪಂದಗಳಿಗೆ ಆವೇಗ ನೀಡುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.
Prime Minister Narendra Modi with Indonesian President Prabowo Subianto, at the Hyderabad House in New Delhi, Saturday, Jan. 25, 2025.
ಇಂಡೋನೇಷ್ಯಾ ಅಧ್ಯಕ್ಷ-ಪ್ರಧಾನಿ ನರೇಂದ್ರ ಮೋದಿ ಭೇಟಿonline desk
Updated on

ಇಂಡೋನೇಷ್ಯಾ: ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ 3 ದಿನಗಳ ಭಾರತ ಪ್ರವಾಸ ಕೈಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಇಂದು ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಉಭಯ ದೇಶಗಳು ಒಟ್ಟಾರೆ ದ್ವಿಪಕ್ಷೀಯ ಸಂಬಂಧಗಳಿಗೆ, ಪ್ರಮುಖವಾಗಿ ರಕ್ಷಣಾ ಉತ್ಪಾದನೆ ಮತ್ತು ಪೂರೈಕೆ ಸರಪಳಿಗಳ ಕ್ಷೇತ್ರದಲ್ಲಿನ ಒಪ್ಪಂದಗಳಿಗೆ ಆವೇಗ ನೀಡುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.

ಜ.26 ರಂದು ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸುಬಿಯಾಂಟೊ ಮುಖ್ಯ ಅತಿಥಿಯಾಗಿದ್ದಾರೆ. ಮಾತುಕತೆಯ ನಂತರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮೋದಿ, ಇಂಡೋನೇಷ್ಯಾವನ್ನು 10 ರಾಷ್ಟ್ರಗಳ ಆಸಿಯಾನ್ ಒಕ್ಕೂಟದಲ್ಲಿ ಮತ್ತು ಇಂಡೋ-ಪೆಸಿಫಿಕ್‌ನಲ್ಲಿ ಭಾರತದ "ಪ್ರಮುಖ ಪಾಲುದಾರ" ಎಂದು ಬಣ್ಣಿಸಿದ್ದಾರೆ. ಎರಡೂ ದೇಶಗಳು ಈ ಪ್ರದೇಶದಲ್ಲಿ ನಿಯಮ ಆಧಾರಿತ ಕ್ರಮಕ್ಕೆ ಬದ್ಧವಾಗಿವೆ ಎಂದು ಮೋದಿ ತಿಳಿಸಿದ್ದಾರೆ.

"ಅಂತರರಾಷ್ಟ್ರೀಯ ಕಾನೂನಿಗೆ ಅನುಗುಣವಾಗಿ ನೌಕಾಯಾನ ಸ್ವಾತಂತ್ರ್ಯವನ್ನು ಖಚಿತಪಡಿಸಿಕೊಳ್ಳಬೇಕು ಎಂದು ನಾವು ಒಪ್ಪುತ್ತೇವೆ" ಎಂದು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಚೀನಾದ ಹೆಚ್ಚುತ್ತಿರುವ ಮಿಲಿಟರಿ ಬಲವರ್ಧನೆಯ ಬಗ್ಗೆ ಜಾಗತಿಕವಾಗಿ ಹೆಚ್ಚುತ್ತಿರುವ ಕಳವಳಗಳ ನಡುವೆ ಮೋದಿ ಹೇಳಿರುವುದು ಗಮನಾರ್ಹವಾಗಿದೆ.

Prime Minister Narendra Modi with Indonesian President Prabowo Subianto, at the Hyderabad House in New Delhi, Saturday, Jan. 25, 2025.
ಗಣರಾಜ್ಯೋತ್ಸವ: ಬಸವರಾಜ್ ಶರಣಪ್ಪ ಜಿಳ್ಳೆ ಸೇರಿ ರಾಜ್ಯದ 21 ಪೋಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

"ನಮ್ಮ ದ್ವಿಪಕ್ಷೀಯ ಸಂಬಂಧಗಳ ವಿವಿಧ ಅಂಶಗಳ ಕುರಿತು ನಾವು ವ್ಯಾಪಕ ಚರ್ಚೆಗಳನ್ನು ನಡೆಸಿದ್ದೇವೆ" ಎಂದು ಪ್ರಧಾನಿ ಹೇಳಿದರು, ಭಾರತ ಮತ್ತು ಇಂಡೋನೇಷ್ಯಾ ರಕ್ಷಣಾ ಉತ್ಪಾದನೆ ಮತ್ತು ಪೂರೈಕೆ ಸರಪಳಿಗಳಲ್ಲಿ ಜಂಟಿಯಾಗಿ ಕೆಲಸ ಮಾಡಲು ಒಪ್ಪಿಕೊಂಡಿವೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com