
ಮುಂಬೈ: ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಹಿಳೆಯೊಬ್ಬರು ಓಲಾ ಕ್ಯಾಬ್ ಚಾಲಕನ ಮೇಲೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚೆಚ್ಚು ವೈರಲ್ ಆಗುತ್ತಿದೆ.
ಮಹಿಳೆ ಜನರೇ ಎದುರೇ ಚಾಲಕನ ಕಪಾಳಕ್ಕೆ ಹೊಡೆದು, ಒದ್ದೆಯುವುದು ವಿಡಿಯೋದಲ್ಲಿದೆ. ಚಾಲಕ ಮಹಿಳೆಯಿಂದ ಬಿಡಿಸಿಕೊಳ್ಳಲು ಯತ್ನಿಸುವುದು ಕಂಡುಬಂದಿದೆ.
ವಿಮಾನ ಹೊರಡುವ ಸರಿಯಾದ ವೇಳೆಗೆ ತನ್ನನ್ನು ವಿಮಾನ ನಿಲ್ದಾಣಕ್ಕೆ ಕ್ಯಾಬ್ ಚಾಲಕ ತಲುಪಸಲಿಲ್ಲ ಎಂದು ಆಕ್ರೋಶಗೊಂಡ ಮಹಿಳೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ವಿಡಿಯೋ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಈ ರೀತಿಯ ಘಟನೆಗಳು ನಡೆದಾಗ ಸಂಬಂಧಿಸಿದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಂದು ಮುಂಬೈ ಸಂಚಾರಿ ಪೊಲೀಸರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ.
Advertisement