
ಗಿರಿದಿಹ್ (ಜಾರ್ಖಂಡ್): ಸೋಮವಾರ ಮುಂಜಾನೆ ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯ ಮನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಫಾಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಶೀತಲ್‌ಪುರ ಪ್ರದೇಶದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಬೆಳಗಿನ ಜಾವ 1.30 ರ ಸುಮಾರಿಗೆ ಸ್ಫೋಟ ಸಂಭವಿಸಿದೆ.
ಮೊದಲಿಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಮತ್ತು ನಂತರ ಸ್ಫೋಟ ಸಂಭವಿಸಿದೆ. ಸ್ಫೋಟವು ಶಕ್ತಿಯುತವಾಗಿತ್ತು. ಮನೆಯ ಛಾವಣಿ ಮತ್ತು ಗೋಡೆಗಳಿಗೆ ಹಾನಿಯಾಗಿದೆ. ಸ್ಫೋಟದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಗಿರಿದಿಹ್ ಪೊಲೀಸ್ ಅಧೀಕ್ಷಕ (ಎಸ್‌ಪಿ) ಬಿಮಲ್ ಕುಮಾರ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಉಮೇಶ್ ದಾಸ್ ಎಂಬಾತನ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಅವರ ಅತ್ತೆ ಸಾವಿಗೀಡಾಗಿದ್ದಾರೆ. ಅವರ ಪತ್ನಿ, ಮಕ್ಕಳು ಮತ್ತು ಮಾವ ಗಾಯಗೊಂಡಿದ್ದಾರೆ ಎಂದು ಮುಫಾಸಿಲ್ ಪೊಲೀಸ್ ಠಾಣೆಯ ಉಸ್ತುವಾರಿ ಶ್ಯಾಮ್ ಕಿಶೋರ್ ಮಹತೋ ತಿಳಿಸಿದ್ದಾರೆ.
ಗಾಯಾಳುಗಳನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ರಾಂಚಿಯ RIMS ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಹೇಳಿದರು.
Advertisement