
ದೆಹಲಿ: ಉತ್ತರ ದೆಹಲಿಯ ಬುರಾರಿ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಆಸ್ಕರ್ ಪಬ್ಲಿಕ್ ಶಾಲೆಯ ಬಳಿ ಹೊಸದಾಗಿ ನಿರ್ಮಿಸಲಾದ ಕಟ್ಟಡ ಸೋಮವಾರ ಸಂಜೆ ಕುಸಿದಿದೆ. ಇಲ್ಲಿಯವರೆಗೆ 12 ಜನರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಲ್ಲಿಯವರೆಗೆ ಇಬ್ಬರು ಮೃತಪಟ್ಟಿರುವುದು ದೃಢವಾಗಿದ್ದು, 12 ಜನರನ್ನು ರಕ್ಷಿಸಲಾಗಿದೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಇನ್ನೂ ಹೆಚ್ಚಿನ ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅವರು ಹೇಳಿದರು. ಸೋಮವಾರ ರಾತ್ರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ದೆಹಲಿ ಪೊಲೀಸರು, ಸಂಜೆ 7 ಗಂಟೆ ಸುಮಾರಿಗೆ ಕುಸಿತದ ಬಗ್ಗೆ ಮಾಹಿತಿ ಪಡೆದರು. ಇದು 200 ಚದರ ಗಜಗಳಷ್ಟು ವಿಸ್ತೀರ್ಣದಲ್ಲಿ ನಿರ್ಮಿಸಲಾಗಿದ್ದ ಹೊಸ ಕಟ್ಟಡವಾಗಿದೆ ಎಂದು ಪ್ರಕಟಣೆ ಹೇಳಿದೆ.
Advertisement