ಕುಂಭ ಮೇಳ ಕಾಲ್ತುಳಿತದಲ್ಲಿ 30 ಭಕ್ತರು ಸಾವು, 90 ಮಂದಿಗೆ ಗಾಯ: ಉತ್ತರ ಪ್ರದೇಶ ಡಿಐಜಿ

ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಭಕ್ತರು ಆಗಮಿಸಿದ್ದು, ನೂಕುನುಗ್ಗಲು ಉಂಟಾಗಿ, ಕಾಲ್ತುಳಿತ ಸಂಭವಿಸಿದೆ.
ಕುಂಭ ಮೇಳ ಕಾಲ್ತುಳಿತದಲ್ಲಿ 30 ಭಕ್ತರು ಸಾವು, 90 ಮಂದಿಗೆ ಗಾಯ: ಉತ್ತರ ಪ್ರದೇಶ ಡಿಐಜಿ
Updated on

ಪ್ರಯಾಗ್‌ರಾಜ್‌: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಕಳೆದ ಎರಡು ವಾರಗಳಿಂದ ಮಹಾಕುಂಭ ಮೇಳ ನಡೆಯುತ್ತಿದ್ದು, ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಬುಧವಾರ ಭಕ್ತರ ಸಂಖ್ಯೆ ದಿಢೀರ್ ಹೆಚ್ಚಾದ ಪರಿಣಾಮ ಕಾಲ್ತುಳಿತ ಸಂಭವಿಸಿದೆ.

ಮಹಾಕುಂಭ ಮೇಳದಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದ ಕಾಲ್ತುಳಿತದಲ್ಲಿ ಒಟ್ಟು 30 ಭಕ್ತರು ಮೃತಪಟ್ಟಿದ್ದಾರೆ ಮತ್ತು 90 ಭಕ್ತರು ಗಾಯಗೊಂಡಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸ್ ಮಹಾ ನಿರ್ದೇಶಕ ವೈಭವ್ ಕೃಷ್ಣ ಅವರು ಹೇಳಿದ್ದಾರೆ.

ಇದುವರೆಗೆ ಇಪ್ಪತ್ತೈದು ಮೃತದೇಹಗಳನ್ನು ಗುರುತಿಸಲಾಗಿದೆ ಮತ್ತು ಗಾಯಗೊಂಡ 90 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಂಭ ಮೇಳದ ಭದ್ರತಾ ಉಸ್ತುವಾರಿ ವಹಿಸಿಕೊಂಡಿರುವ ವೈಭವ್ ಕೃಷ್ಣ ಅವರು ತಿಳಿಸಿದ್ದಾರೆ.

ಕುಂಭ ಮೇಳ ಕಾಲ್ತುಳಿತದಲ್ಲಿ 30 ಭಕ್ತರು ಸಾವು, 90 ಮಂದಿಗೆ ಗಾಯ: ಉತ್ತರ ಪ್ರದೇಶ ಡಿಐಜಿ
ಕುಂಭ ಮೇಳದಲ್ಲಿ ಕಾಲ್ತುಳಿತ: ತಾಯಿ, ಮಗಳು ಸೇರಿ ಬೆಳಗಾವಿಯ ನಾಲ್ವರು ಸಾವು

ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಭಕ್ತರು ಆಗಮಿಸಿದ್ದು, ನೂಕುನುಗ್ಗಲು ಉಂಟಾಗಿ, ಕಾಲ್ತುಳಿತ ಸಂಭವಿಸಿದೆ.

ಉತ್ತರ ಪ್ರದೇಶ ಸರ್ಕಾರದ ಪ್ರಕಾರ ಬುಧವಾರ ಬೆಳಿಗ್ಗೆ 10 ಗಂಟೆಯವರೆಗೆ 3.61 ಕೋಟಿ ಭಕ್ತರು ಸಂಗಮದಲ್ಲಿ ಸ್ನಾನ ಮಾಡಿದ್ದಾರೆಂದು ತಿಳಿದುಬಂದಿದೆ. ಅಲ್ಲದೆ, ಸ್ಥಗಿತಗೊಳಿಸಲಾಗಿದ್ದ ಅಮೃತ ಪುಣ್ಯ ಸ್ನಾನವನ್ನು ಪುನರಾರಂಭಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com