
ಚೆನ್ನೈ: ಚೆನ್ನೈನ ಪೂರ್ವ ಕರಾವಳಿ ರಸ್ತೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕೆಲವು ಮಹಿಳೆಯರನ್ನು ತಮ್ಮ ಎಸ್‌ಯುವಿಯಲ್ಲಿ ಚೇಸ್ ಮಾಡಿದ್ದ ಏಳು ಆರೋಪಿಗಳಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ಏಳು ಆರೋಪಿಗಳಲ್ಲಿ ಆರು ಕಾಲೇಜು ವಿದ್ಯಾರ್ಥಿಗಳಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ ಮತ್ತು ಉಳಿದವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸ್ ಉಪ ಆಯುಕ್ತ ಎಸಿ ಕಾರ್ತಿಕೇಯನ್ (ಪಲ್ಲಿಕರಣೈ) ಸುದ್ದಿಗಾರರಿಗೆ ತಿಳಿಸಿದ್ದಾರೆ.
ಅಲ್ಲದೆ, ಘಟನೆಯಲ್ಲಿ ಭಾಗಿಯಾಗಿರುವ ಎರಡು ವಾಹನಗಳು, ಎರಡೂ ಎಸ್‌ಯುವಿಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ತನಿಖೆ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.
ಪೂರ್ವ ಕರಾವಳಿ ರಸ್ತೆಯಲ್ಲಿ ಜನವರಿ 25, 2025 ರಂದು ಬೆಳಗಿನ ಜಾವ 3 ಗಂಟೆಯ ಹೊತ್ತಿಗೆ ಈ ಘಟನೆ ನಡೆದಿದ್ದು, ಎಫ್‌ಐಆರ್ ದಾಖಲಾದ ನಂತರ ನಡೆದ ತನಿಖೆಯಲ್ಲಿ ಏಳು ಪುರುಷರ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಹಲವಾರು ಪ್ರಶ್ನೆಗಳು ಹುಟ್ಟಿಕೊಂಡಿದ್ದು, ತನಿಖೆ ಮುಂದುವರೆದಿದೆ. ಕೆಲ ಸಂಗತಿಗಳನ್ನು ಹೊರತುಪಡಿಸಿ ಹೆಚ್ಚಿನ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.
ಆರೋಪಿಗಳ ಎಸ್‌ಯುವಿಯಲ್ಲಿ ಡಿಎಂಕೆ ಧ್ವಜ ಇದ್ದ ಬಗ್ಗೆ ಪ್ರತಿಕ್ರಿಯಿಸಿದ ಅಧಿಕಾರಿ, ಆರೋಪಿಗಳಲ್ಲಿ ಒಬ್ಬರಾದ ಚಾಲಕ "ಟೋಲ್‌ಪ್ಲಾಜಾಗಳನ್ನು ತಪ್ಪಿಸುವ" ಉದ್ದೇಶಕ್ಕಾಗಿ ಅದನ್ನು ಬಳಸಿದ್ದಾನೆ. ಆರೋಪಿಗಳೊಂದಿಗೆ ಯಾವುದೇ ರಾಜಕೀಯ ನಂಟು ಇಲ್ಲ ಎಂದು ತಿಳಿಸಿದ್ದಾರೆ.
ಆರೋಪಿಗಳಲ್ಲಿ ಒಬ್ಬನಾದ ಚಂದ್ರು ವಿರುದ್ಧ ಎರಡು ಕ್ರಿಮಿನಲ್ ಪ್ರಕರಣಗಳಿವೆ ಮತ್ತು ಅವನು ಈಗಾಗಲೇ ಪ್ರಕರಣಗಳಿಗೆ ಸಂಬಂಧಿಸಿದಂತೆ ಜೈಲಿನಲ್ಲಿದ್ದನು ಮತ್ತು ಏಳನೇ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ಅವರು ಅಧಿಕಾರಿ ಹೇಳಿದ್ದಾರೆ.
Advertisement