
ನವದೆಹಲಿ: ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿ ವಿಮಾನ ಹಾಗೂ ಸೇನಾ ಹೆಲಿಕಾಪ್ಟರ್ ನಡುವೆ ಘರ್ಷಣೆ ಸಂಭವಿಸಿ 67 ಮಂದಿ ಸಾವನ್ನಪ್ಪಿದ ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ನಲ್ಲಿ ಮಾಡಿರುವ ಅವರು, ವಾಷಿಂಗ್ಟನ್ ಡಿಸಿಯಲ್ಲಿ ಸಂಭವಿಸಿದ ದುರಂತ ಘರ್ಷಣೆಯಲ್ಲಿನ ಪ್ರಾಣಹಾನಿಯಿಂದ ತೀವ್ರ ದುಃಖವಾಗಿದೆ. ಸಂತ್ರಸ್ತರ ಕುಟುಂಬಗಳಿಗೆ ನಮ್ಮ ಸಂತಾಪಗಳು. ನಾವು ಯುನೈಟೆಡ್ ಸ್ಟೇಟ್ಸ್ ಜನರೊಂದಿಗೆ ಒಗ್ಗಟ್ಟಿನಲ್ಲಿ ನಿಲ್ಲುತ್ತೇವೆಂದು ಹೇಳಿದ್ದಾರೆ.
ಅಮೆರಿಕನ್ ಏರ್ಲೈನ್ಸ್ ವಿಮಾನವು ಮಿಲಿಟರಿ ಹೆಲಿಕಾಪ್ಟರ್ಗೆ ಡಿಕ್ಕಿ ಹೊಡೆದ ನಂತರ ಎರಡೂ ವಿಮಾನಗಳು ಅಪಘಾತಕ್ಕೀಡಾಗಿ 67 ಮಂದಿ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಅಮೆರಿಕಾದ ರೊನಾಲ್ಡ್ ರೇಗನ್ ವಾಷಿಂಗ್ಟನ್ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಪೊಟೊಮ್ಯಾಕ್ ನದಿಯಲ್ಲಿ ವಿಮಾನ ಬಿದ್ದಿದೆ. ಈಗಾಗಲೇ 28 ಶವಗಳನ್ನು ನದಿಯಿಂದ ಹೊರತೆಗೆಯಲಾಗಿದೆ. ಅಪಘಾತದಿಂದ ಯಾರೂ ಬದುಕುಳಿದಿಲ್ಲ ಎಂದು ವಾಷಿಂಗ್ಟನ್ ಅಗ್ನಿಶಾಮಕ ಮುಖ್ಯಸ್ಥ ಜಾನ್ ಡೊನೆಲ್ಲಿ ಹೇಳಿದ್ದಾರೆ.
Advertisement