ಮಹಾಕುಂಭ ಮೇಳ: ಭಕ್ತರಿಗೆ ನೀಡುವ ಆಹಾರದಲ್ಲಿ ಬೂದಿ ಬೆರೆಸಿದ್ದ ಪೊಲೀಸ್ ಅಧಿಕಾರಿ ಅಮಾನತು

ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಸೊರಾನ್ ನ ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಬ್ರಿಜೇಶ್ ಕುಮಾರ್ ತಿವಾರಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು
Video showing him ‘mixing ash’ in ‘bhandara’ food
ಆಹಾರದಲ್ಲಿ ಬೂದಿಯನ್ನು ಬೆರೆಸಿದ ದೃಶ್ಯ.
Updated on

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಮಹಾ ಕುಂಭಮೇಳದಲ್ಲಿ ಭಕ್ತರಿಗಾಗಿ ಸಮುದಾಯ ಭೋಜನ ತಯಾರಿಸಲಾಗುತ್ತಿದ್ದ ಆಹಾರದಲ್ಲಿ ಬೂದಿಯನ್ನು ಬೆರೆಸಿದ ವಿಡಿಯೋ ವೈರಲ್ ಆದ ನಂತರ ಪೊಲೀಸ್ ಅಧಿಕಾರಿಯನ್ನು ಗುರುವಾರ ಅಮಾನತುಗೊಳಿಸಲಾಗಿದೆ.

ಈ ಬೆಳವಣಿಗೆಯ ಬಗ್ಗೆ ಮಾತನಾಡಿದ ಡಿಸಿಪಿ (ಗಂಗಾ ನಗರ) ಕುಲದೀಪ್ ಸಿಂಗ್ ಗುಣವತ್, ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಸೊರಾನ್ ನ ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಬ್ರಿಜೇಶ್ ಕುಮಾರ್ ತಿವಾರಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ಈ ವೀಡಿಯೋದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಒಲೆಯ ಮೇಲೆ ತಯಾರಿಸಲಾಗುವ ಆಹಾರಕ್ಕೆ ಬೂದಿಯನ್ನು ಸೇರಿಸುವುದನ್ನು ಕಾಣಬಹುದಾಗಿತ್ತು.

ಬಳಕೆದಾರರೊಬ್ಬರು ಡಿಸಿಪಿ ಗಂಗಾ ನಗರ್ ಅವರ ಖಾತೆಯನ್ನು ಟ್ಯಾಗ್ ಮಾಡಿ ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್ ಎಕ್ಸ್‌ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ ಮತ್ತು ಈ ನಾಚಿಕೆಗೇಡಿನ ಕೃತ್ಯಕ್ಕಾಗಿ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು.

ಈ ಸಂಬಂಧ ಕ್ರಮ ಕೈಗೊಂಡು ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಡಿಸಿಪಿ, ಎಸಿಪಿ ವರದಿ ಆಧರಿಸಿ ಅಧಿಕಾರಿಯನ್ನು ಅಮಾನತು ಮಾಡಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com