
ಹೈದರಾಬಾದ್: ಖಾಸಗಿ ಮತ್ತು ಕಾರ್ಪೊರೇಟ್ ಶಾಲೆಗಳು ತಮ್ಮ ಒಟ್ಟಾರೆ ಸೀಟುಗಳ ಪೈಕಿ ಶೇ.25 ರಷ್ಟು ಸೀಟುಗಳನ್ನು ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಬೇಕು ಎಂದು ಹೇಳಲಾಗಿದೆ.
ತೆಲಂಗಾಣ ಸರ್ಕಾರದ ಎಸ್‌ಸಿ ಮತ್ತು ಎಸ್‌ಟಿ ಕಲ್ಯಾಣ ಸಚಿವ ಅಡ್ಲೂರಿ ಲಕ್ಷ್ಮಣ್ ಈ ಹೇಳಿಕೆ ನೀಡಿದ್ದು, ಖಾಸಗಿ ಮತ್ತು ಕಾರ್ಪೊರೇಟ್ ಶಾಲೆಗಳು ತಮ್ಮ ಒಟ್ಟಾರೆ ಸೀಟುಗಳ ಪೈಕಿ ಶೇ.25 ರಷ್ಟು ಸೀಟುಗಳನ್ನು ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಬೇಕು ಎಂದು ಹೇಳಿದ್ದಾರೆ.
ನಿಬಂಧನೆಗಳ ಪ್ರಕಾರ, ಈ ಪ್ರವೇಶದ ವೆಚ್ಚವನ್ನು ಸರ್ಕಾರ ಭರಿಸಲಿದೆ ಮತ್ತು ಆಯ್ಕೆ ಪ್ರಕ್ರಿಯೆಯನ್ನು ಆಯಾ ಜಿಲ್ಲಾಧಿಕಾರಿಗಳು ನೋಡಿಕೊಳ್ಳುತ್ತಾರೆ. ಮಂಗಳವಾರ, ವಸತಿ ಶಾಲೆಗಳು ಮತ್ತು ಹಾಸ್ಟೆಲ್‌ಗಳ ಕಲ್ಯಾಣಕ್ಕೆ ಸಂಬಂಧಿಸಿದ 210 ಕೋಟಿ ರೂ.ಗಳ ಬಾಕಿ ಬಿಲ್‌ಗಳನ್ನು ಸರ್ಕಾರ ತೆರವುಗೊಳಿಸಿದೆ ಎಂದು ಸಚಿವರು ಹೇಳಿದರು.
ದೀರ್ಘ ಕಾಲದಿಂದ ಬಾಕಿ ಉಳಿದಿರುವ ಹಣವನ್ನು ಬಿಡುಗಡೆ ಮಾಡಿದ್ದಕ್ಕಾಗಿ ಅವರು ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಮತ್ತು ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಈ ಕಲ್ಯಾಣ ಸಂಸ್ಥೆಗಳಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂಗಳು ಮತ್ತು ಪುಸ್ತಕಗಳನ್ನು ಖರೀದಿಸಲು ಸರ್ಕಾರ ಶೀಘ್ರದಲ್ಲೇ ಟೆಂಡರ್‌ಗಳನ್ನು ಆಹ್ವಾನಿಸಲಿದೆ ಎಂದು ಅಡ್ಲೂರಿ ಲಕ್ಷ್ಮಣ್ ಹೇಳಿದರು.
ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆಯ ಬಗ್ಗೆ ಕೇಳಿದಾಗ, 'ಸಾಮಾಜಿಕ ಮಾಧ್ಯಮ ಪ್ರಭಾವ ಮತ್ತು ಕೌಟುಂಬಿಕ ಸಮಸ್ಯೆಗಳು ಸೇರಿದಂತೆ ಹಲವು ಕಾರಣಗಳಿವೆ. ಅಂತಹ ಘಟನೆಗಳನ್ನು ತಡೆಯಲು ನಾವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ' ಎಂದರು.
Advertisement