ಉದ್ಯೋಗ ಆಧರಿತ ಪ್ರೋತ್ಸಾಹಧನ ಯೋಜನೆ: ದೇಶದಲ್ಲಿ ಎರಡು ವರ್ಷದಲ್ಲಿ 3.5 ಕೋಟಿ ಉದ್ಯೋಗ ಸೃಷ್ಟಿ ನಿರೀಕ್ಷೆ!

ಈ ಯೋಜನೆಯು ಎರಡು ವರ್ಷಗಳ ಅವಧಿಯಲ್ಲಿ ದೇಶಾದ್ಯಂತ 3.5 ಕೋಟಿ ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು.
Representational image
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ʻಉದ್ಯೋಗ ಆಧರಿತ ಪ್ರೋತ್ಸಾಹಧನʼ (ಇಎಲ್ಐ) ಯೋಜನೆಗೆ ಅನುಮೋದನೆ ನೀಡಿದೆ. ಉದ್ಯೋಗ ಸೃಷ್ಟಿ, ಎಲ್ಲ ವಲಯಗಳಲ್ಲಿ ಉದ್ಯೋಗಾವಕಾಶ ಮತ್ತು ಸಾಮಾಜಿಕ ಭದ್ರತೆಯನ್ನು ಹೆಚ್ಚಿಸುವುದು ಈ ಯೋಜನೆಯ ಉದ್ದೇಶವಾಗಿದೆ.

99,446 ಕೋಟಿ ರೂ.ಗಳ ಅನುದಾನದೊಂದಿಗೆ, ʻಇಎಲ್ಐʼ ಯೋಜನೆಯು 2 ವರ್ಷಗಳ ಅವಧಿಯಲ್ಲಿ ದೇಶದಲ್ಲಿ 3.5 ಕೋಟಿಗೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು. ಈ ಪೈಕಿ 1.92 ಕೋಟಿ ಫಲಾನುಭವಿಗಳು ಮೊದಲ ಬಾರಿಗೆ ಉದ್ಯೋಗ ಪಡೆಯಲಿದ್ದಾರೆ.

ಈ ಯೋಜನೆಯ ಪ್ರಯೋಜನಗಳು ಆಗಸ್ಟ್ 1, 2025 ಮತ್ತು ಜುಲೈ 31, 2027 ರ ನಡುವೆ ಸೃಷ್ಟಿಯಾಗುವ ಉದ್ಯೋಗಗಳಿಗೆ ಅನ್ವಯಿಸುತ್ತವೆ.

ಈ ಯೋಜನೆಯು ಎರಡು ಭಾಗಗಳನ್ನು ಒಳಗೊಂಡಿದ್ದು, ʻಭಾಗ-ಎʼ ಮೊದಲ ಬಾರಿಗೆ ಕೆಲಸ ಮಾಡುವವರ ಮೇಲೆ ಗಮನ ಕೇಂದ್ರೀಕರಿಸಿದರೆ ʻಭಾಗ-ಬಿʼ ಉದ್ಯೋಗದಾತರ ಮೇಲೆ ಗಮನ ಕೇಂದ್ರೀಕರಿಸಿದೆ:

Representational image
ಕರ್ನಾಟಕವನ್ನು ಕೈಗಾರಿಕಾ ಪ್ರಗತಿ ಜತೆಗೆ ಸುಸ್ಥಿರ ರಾಜ್ಯ ಮಾಡುವ ಗುರಿ; ನೂತನ ನೀತಿ ಮೂಲಕ 20 ಲಕ್ಷ ಉದ್ಯೋಗ ಸೃಷ್ಟಿ: ಡಿ.ಕೆ ಶಿವಕುಮಾರ್

ಭಾಗ ಎ: ಮೊದಲ ಬಾರಿಯ ಉದ್ಯೋಗಿಗಳಿಗೆ ಪ್ರೋತ್ಸಾಹ:

ಈ ಭಾಗವು ʻಇಪಿಎಫ್ಒʼ ನಲ್ಲಿ ನೋಂದಾಯಿತರಾದ ಮೊದಲ ಬಾರಿಯ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡಿದೆ. ಇದರ ಅಡಿಯಲ್ಲಿ ಗರಿಷ್ಠ 15,000 ರೂ.ಗಳವರೆಗೆ ಒಂದು ತಿಂಗಳ ಇಪಿಎಫ್ ವೇತನವನ್ನು ಎರಡು ಕಂತುಗಳಲ್ಲಿ ನೀಡಲಾಗುತ್ತದೆ.

ಮೊದಲ ಕಂತನ್ನು 6 ತಿಂಗಳ ಸೇವೆಯ ನಂತರ ಮತ್ತು 2ನೇ ಕಂತನ್ನು 12 ತಿಂಗಳ ಸೇವೆಯ ನಂತರ ಹಾಗೂ ಉದ್ಯೋಗಿಯು ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಪೂರ್ಣಗೊಳಿಸಿದ ನಂತರ ಪಾವತಿಸಲಾಗುತ್ತದೆ.

ಮೊದಲ ಕಂತನ್ನು 6 ತಿಂಗಳ ಸೇವೆಯ ನಂತರ ಮತ್ತು 2ನೇ ಕಂತನ್ನು 12 ತಿಂಗಳ ಸೇವೆಯ ನಂತರ ಹಾಗೂ ಉದ್ಯೋಗಿಯು ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಪೂರ್ಣಗೊಳಿಸಿದ ನಂತರ ಪಾವತಿಸಲಾಗುತ್ತದೆ.

ಭಾಗ ಬಿ: ಉದ್ಯೋಗದಾತರಿಗೆ ಬೆಂಬಲ:

ಈ ಭಾಗವು ಎಲ್ಲಾ ಕ್ಷೇತ್ರಗಳಲ್ಲಿ ಹೆಚ್ಚುವರಿ ಉದ್ಯೋಗ ಸೃಷ್ಟಿಯತ್ತ ಗಮನ ಹರಿಸುತ್ತದೆಯಾದರೂ, ಉತ್ಪಾದನಾ ವಲಯದ ಮೇಲೆ ವಿಶೇಷವಾಗಿ ಗಮನ ಕೇಂದ್ರೀಕರಿಸುತ್ತದೆ. ಗರಿಷ್ಠ 1 ಲಕ್ಷ ರೂ.ವರೆಗಿನ ವೇತನ ಹೊಂದಿರುವ ಉದ್ಯೋಗಿಗಳಿಗೆ ಸಂಬಂಧಿಸಿದಂತೆ ಉದ್ಯೋಗದಾತರು ಈ ಪ್ರೋತ್ಸಾಹಧನವನ್ನು ಪಡೆಯುತ್ತಾರೆ. ಕನಿಷ್ಠ ಆರು ತಿಂಗಳವರೆಗೆ ನಿರಂತರ ಉದ್ಯೋಗ ಹೊಂದಿರುವ ಪ್ರತಿ ಹೆಚ್ಚುವರಿ ಉದ್ಯೋಗಿಗೆ, ಸರ್ಕಾರವು ಎರಡು ವರ್ಷಗಳ ತನಕ ತಿಂಗಳಿಗೆ 3,000 ರೂಪಾಯಿಗಳವರೆಗೆ ಪ್ರೋತ್ಸಾಹಧನ ನೀಡುವ ಮೂಲಕ ಉದ್ಯೋಗದಾತರನ್ನು ಪ್ರೋತ್ಸಾಹಿಸುತ್ತದೆ. ಉತ್ಪಾದನಾ ವಲಯಕ್ಕೆ, ಪ್ರೋತ್ಸಾಹಕಗಳನ್ನು 3 ಮತ್ತು 4 ನೇ ವರ್ಷಗಳಿಗೂ ವಿಸ್ತರಿಸಲಾಗುವುದು.

ಪ್ರೋತ್ಸಾಹಕ ಪಾವತಿ ಕಾರ್ಯವಿಧಾನ:

ಯೋಜನೆಯ ʻಭಾಗ-ಎʼ ಅಡಿಯಲ್ಲಿ ಮೊದಲ ಬಾರಿಯ ಉದ್ಯೋಗಿಗಳಿಗೆ ಎಲ್ಲಾ ಪಾವತಿಗಳನ್ನು ʻಆಧಾರ್ ಬ್ರಿಡ್ಜ್ ಪೇಮೆಂಟ್ ಸಿಸ್ಟಮ್ʼ(ಎಬಿಪಿಎಸ್) ಬಳಸಿ ʻಡಿಬಿಟಿʼ (ನೇರ ಲಾಭ ವರ್ಗಾವಣೆ) ಮೂಲಕ ಮಾಡಲಾಗುತ್ತದೆ. ʻಭಾಗ-ಬಿʼ ಅಡಿಯಲ್ಲಿ ಉದ್ಯೋಗದಾತರಿಗೆ ಪಾವತಿಗಳನ್ನು ನೇರವಾಗಿ ಅವರ ಪ್ಯಾನ್-ಲಿಂಕ್ ಮಾಡಿದ ಖಾತೆಗಳಿಗೆ ಮಾಡಲಾಗುತ್ತದೆ.

ಅರ್ಹತೆ ಪಡೆಯುವುದು ಹೇಗೆ

ಕಾರ್ಮಿಕರ ಸಂಖ್ಯೆ 50ಕ್ಕಿಂತ ಕಡಿಮೆಯಿದ್ದರೆ ಅಂತಹ ಸಂಸ್ಥೆಗಳು ಇನ್ನೂ ಇಬ್ಬರು ಕಾರ್ಮಿಕರನ್ನು ನೇಮಿಸಿಕೊಳ್ಳಬೇಕು. ದೊಡ್ಡ ಸಂಸ್ಥೆಗಳು 5 ಹೊಸ ಸಿಬ್ಬಂದಿಯನ್ನು ಸೇರಿಸಿಕೊಳ್ಳಬೇಕು, ಅವರನ್ನು ಆರು ತಿಂಗಳವರೆಗೆ ಇರಿಸಿಕೊಳ್ಳಬೇಕಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com