Security force
ಭದ್ರತಾ ಪಡೆಗಳು

ಜಮ್ಮು-ಕಾಶ್ಮೀರ: ಕಿಶ್ತ್ವಾರ್'ನಲ್ಲಿ ಮೂವರು 'ಜೈಶ್ ಉಗ್ರ'ರಿಗಾಗಿ ಶೋಧ ಕಾರ್ಯಾಚರಣೆ ತೀವ್ರ!

ಡ್ರೋನ್‌ಗಳು ಮತ್ತು ಸ್ನಿಫರ್ ಡಾಗ್‌ಗಳೊಂದಿಗೆ ಹೆಚ್ಚುವರಿ ಪಡೆ ನಿಯೋಜನೆಯೊಂದಿಗೆ ಶೋಧ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ.
Published on

ಕಿಶ್ತ್ವಾರ್ : ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್' ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಅಡಗಿರುವ ಮೂವರು ಜೈಶ್ ಉಗ್ರರಿಗಾಗಿ ಗುರುವಾರ ಭಾರಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಬುಧವಾರ ರಾತ್ರಿ ಕುಚಲ್-ಚತ್ರೂ ಬೆಲ್ಟ್‌ನ ದಟ್ಟ ಅರಣ್ಯದಿಂದ ಕೂಡಿದ ಕಂಝಲ್ ಮಂಡು ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಎನ್ ಕೌಂಟರ್ ನಂತರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡ್ರೋನ್‌ಗಳು ಮತ್ತು ಸ್ನಿಫರ್ ಡಾಗ್‌ಗಳೊಂದಿಗೆ ಹೆಚ್ಚುವರಿ ಪಡೆ ನಿಯೋಜನೆಯೊಂದಿಗೆ ಶೋಧ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ.

ಇಂದು ಬೆಳಗ್ಗೆ ಮುಂದುವರಿದ ಗುಂಡಿನ ಕಾಳಗದಲ್ಲಿ ಓರ್ವ ಉಗ್ರ ಗಾಯಗೊಂಡಿದ್ದಾನೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ತಿಳಿದುಬಂದಿಲ್ಲ. ಚತ್ರೂವಿನ ಕುಚಾಲ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ನಿನ್ನೆ ಸಂಜೆ 7-45ರ ಸುಮಾರಿಗೆ ಮಾಹಿತಿ ತಿಳಿದುಬಂದ ನಂತರ ಕಾರ್ಯಾಚರಣೆ ಆರಂಭಿಸಲಾಯಿತು. ಕೊನೆಯ ವರದಿಗಳು ಬಂದಾಗ ಗುಂಡಿನ ಚಕಮಕಿ ಮುಂದುವರೆದಿದೆ.

ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಸಂಘಟನೆಯೊಂದಿಗೆ ಸಂಬಂಧ ಹೊಂದಿರುವ ಉಗ್ರರನ್ನು ಹೊಡೆದುರುಳಿಸಲು ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರನ್ನು ನಿಯೋಜಿಸಲಾಗಿದೆ.

ಜಿಲ್ಲೆಯ ಬೆಟ್ಟಗಳಲ್ಲಿ ಪ್ರಮುಖ ಉಗ್ರರಾದ ಸೈಫುಲ್ಲಾ ಮತ್ತು ಆದಿಲ್ ಅಡಗಿರುವ ಮಾಹಿತಿ ಸಿಕ್ಕಿದೆ. ಕಳೆದೊಂದು ವಾರದಲ್ಲಿ ಜಮ್ಮು ಪ್ರದೇಶದಲ್ಲಿ ಎರಡನೇ ಬಾರಿಗೆ ನಡೆಯುತ್ತಿರುವ ಎನ್ ಕೌಂಟರ್ ಇದಾಗಿದೆ. ಜೂನ್ 26 ರಂದು ನಡೆದ ಎನ್ ಕೌಂಟರ್ ಲ್ಲಿ ಪಾಕಿಸ್ತಾನ ಮೂಲದ ಜೆಎಂ ಉಗ್ರನನ್ನು ಹೊಡೆದುರುಳಿಸಲಾಗಿತ್ತು.ಆತನ ಮೂವರು ಸಹಚರರು ತಪ್ಪಿಸಿಕೊಂಡಿದ್ದರು.

Security force
ಜಮ್ಮು-ಕಾಶ್ಮೀರ: ಕಿಶ್ತ್ವಾರ್'ನಲ್ಲಿ ಉಗ್ರರ ವಿರುದ್ಧ ಮುಂದುವರೆದ ಸೇನಾ ಕಾರ್ಯಾಚರಣೆ; ಓರ್ವ ಯೋಧ ಹುತಾತ್ಮ; Video

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com