
ಬ್ರೆಜಿಲ್: ಭಯೋತ್ಪಾದನೆಯನ್ನು ಬೆಂಬಲಿಸುತ್ತಿರುವ ಪಾಕಿಸ್ತಾನದ ಮೇಲೆ ಪ್ರಧಾನಿ ನರೇಂದ್ರ ಮೋದಿ ಬ್ರಿಕ್ಸ್ ಶೃಂಗಸಭೆಯಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸುವಲ್ಲಿ ಭಾರತದ ಪರವಾಗಿ ನಿಂತ ರಾಷ್ಟ್ರಗಳಿಗೆ ಧನ್ಯವಾದ ಅರ್ಪಿಸಿ, ಪಾಕಿಸ್ತಾನವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.
ಪಹಲ್ಗಾಮ್‌ನಲ್ಲಿ ನಡೆದ ಪಾಕಿಸ್ತಾನ ಸಂಬಂಧಿತ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದರು, ನಂತರ ಭಾರತ ಆಪರೇಷನ್ ಸಿಂಧೂರ್ ನ್ನು ಪ್ರಾರಂಭಿಸಿ ಪಾಕಿಸ್ತಾನದಲ್ಲಿನ ಭಯೋತ್ಪಾದಕ ಮೂಲಸೌಕರ್ಯ, ವಾಯುನೆಲೆಗಳನ್ನು ವಿಮಾನ ನಿಗ್ರಹ ಕ್ಷಿಪಣಿ ವ್ಯವಸ್ಥೆಗಳಂತಹ ಮಿಲಿಟರಿ ಗುರಿಗಳನ್ನು ನಾಶಪಡಿಸಿತು.
ಪಾಕಿಸ್ತಾನ ಉಗ್ರವಾದವನ್ನು ಬೆಂಬಲಿಸುತ್ತಿರುವ ರಾಷ್ಟ್ರವಾದರೂ ಭಾರತ ಭಯೋತ್ಪಾದನೆಯ ಬಲಿಪಶುವಾಗಿದೆ ಮತ್ತು ಆದ್ದರಿಂದ ಬಲಿಪಶುಗಳು ಮತ್ತು ಬೆಂಬಲಿಗರನ್ನು ಒಂದೇ ತಕ್ಕಡಿಯಲ್ಲಿ ತೂಗಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಬ್ರಿಕ್ಸ್ ಶೃಂಗಸಭೆಯಲ್ಲಿ ವಿಶ್ವ ನಾಯಕರಿಗೆ ತಿಳಿಸಿದ್ದಾರೆ.
ವೈಯಕ್ತಿಕ ಅಥವಾ ರಾಜಕೀಯ ಲಾಭಕ್ಕಾಗಿ ಭಯೋತ್ಪಾದನೆ ಹರಡುವಿಕೆಯ ವಿರುದ್ಧ ಏನನ್ನೂ ಹೇಳುವ ಅಥವಾ ಮಾಡದವರ ಬಗ್ಗೆಯೂ ಅವರು ಪ್ರಸ್ತಾಪಿಸಿದರು ಮತ್ತು ಭಯೋತ್ಪಾದಕರಿಗೆ ಮೌನ ಒಪ್ಪಿಗೆ ನೀಡುವುದನ್ನು ಸ್ವೀಕಾರಾರ್ಹವಲ್ಲ ಎಂದು ಒತ್ತಿ ಹೇಳಿದರು.
ಪಾಕಿಸ್ತಾನ ತನ್ನ ನೆಲದಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡುವ ಮೂಲಕ ಭಯೋತ್ಪಾದನೆಯನ್ನು ರಾಷ್ಟ್ರ ನೀತಿಯಾಗಿ ಹೇಗೆ ಬಳಸುತ್ತಿದೆ ಎಂಬುದನ್ನು ಭಾರತ ಹಲವು ಬಾರಿ ಸ್ಪಷ್ಟ ಪುರಾವೆಗಳೊಂದಿಗೆ ತೋರಿಸಿದೆ.
2026 ರಲ್ಲಿ ಭಾರತ ಬ್ರಿಕ್ಸ್ ಶೃಂಗಸಭೆಯನ್ನು ಆಯೋಜಿಸಲಿದೆ. ಜಂಟಿ ಘೋಷಣೆ ಅಥವಾ 'ರಿಯೊ ಡಿ ಜನೈರೊ ಘೋಷಣೆ'ಯಲ್ಲಿ, ಬ್ರಿಕ್ಸ್ ಗುಂಪಿನ ನಾಯಕರು ಯಾವುದೇ ಭಯೋತ್ಪಾದನಾ ಕೃತ್ಯಗಳನ್ನು ಅಪರಾಧ ಮತ್ತು ಅಸಮರ್ಥನೀಯ ಎಂದು ತೀವ್ರವಾಗಿ ಖಂಡಿಸಿದ್ದಾರೆ.
ಭಯೋತ್ಪಾದಕರ ಗಡಿಯಾಚೆಗಿನ ಚಲನೆ, ಭಯೋತ್ಪಾದನೆಗೆ ಹಣಕಾಸು ಒದಗಿಸುವುದು ಮತ್ತು ಸುರಕ್ಷಿತ ತಾಣಗಳು ಸೇರಿದಂತೆ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳಲ್ಲಿ ಭಯೋತ್ಪಾದನೆಯನ್ನು ಎದುರಿಸಲು ನಾವು ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇವೆ" ಎಂದು ಜಂಟಿ ಘೋಷಣೆ ಪಾಕಿಸ್ತಾನವನ್ನು ಹೆಸರಿಸದೆ ಹೇಳಿದೆ.
ಆದಾಗ್ಯೂ, 2017 ರಲ್ಲಿ ಚೀನಾದ ಕ್ಸಿಯಾಮೆನ್‌ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ, ಬ್ರಿಕ್ಸ್ ಘೋಷಣೆ ಲಷ್ಕರ್-ಎ-ತೈಬಾ, ಜೈಶ್-ಎ-ಮೊಹಮ್ಮದ್, ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ (ಟಿಟಿಪಿ) ಮತ್ತು ಹಿಜ್ಬ್-ಉತ್-ತಹ್ರೀರ್ ಸೇರಿದಂತೆ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳನ್ನು ಪ್ರಾದೇಶಿಕ ಭದ್ರತಾ ಕಾಳಜಿಗಳೆಂದು ಸ್ಪಷ್ಟವಾಗಿ ಹೆಸರಿಸಿದೆ. ಆದಾಗ್ಯೂ, ಪಾಕಿಸ್ತಾನವನ್ನು ನೇರವಾಗಿ ಹೆಸರಿಸಲಾಗಿಲ್ಲ.
Advertisement