
ಹೈದರಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮಾರ್ಫ್ ಮಾಡಿದ ಫೋಟೋವನ್ನು ಸ್ಯಾನಿಟರಿ ಪ್ಯಾಡ್‌ನಲ್ಲಿ ಹಾಕಿ ವಿಡಿಯೋ ಪ್ರಸಾರ ಮಾಡಿದ ಹಾಸ್ಯನಟ ರತನ್ ರಂಜನ್ ಮತ್ತು ಇತರರ ವಿರುದ್ಧ ಹೈದರಾಬಾದ್‌ನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಈ ಸಂಬಂಧ ತೆಲಂಗಾಣ ಯುವ ಕಾಂಗ್ರೆಸ್ ಅಧ್ಯಕ್ಷ ಜಕ್ಕಿಡಿ ಶಿವ ಚರಣ್ ರೆಡ್ಡಿ ಅವರು ಪೊಲೀಸರಿಗೆ ದೂರು ನೀಡಿದ್ದು, ರಂಜನ್ ಮತ್ತು ಇತರರು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಮೂಲಕ ರಾಹುಲ್ ಗಾಂಧಿಯವರ ವಿರುದ್ಧ ಸುಳ್ಳು ಮತ್ತು ದುರುದ್ದೇಶಪೂರಿತ ಮಾಹಿತಿಯನ್ನು ಹರಡುತ್ತಿದ್ದಾರೆ. ಈ ಈ ಮೂಲಕ ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದ್ದಾರೆ.
ದೂರುದಾರರ ಪ್ರಕಾರ, ರಂಜನ್, ರಾಹಲ್ ಗಾಂಧಿಯವರ ಮಾರ್ಫ್ ಮಾಡಿದ ಚಿತ್ರವನ್ನು ಸ್ಯಾನಿಟರಿ ಪ್ಯಾಡ್‌ನೊಳಗೆ ಇರಿಸಿ, ಅದರ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸುವ/ಪ್ರಸಾರ ಮಾಡುವ ಮೂಲಕ ರಂಜನ್ ಬಿಹಾರದಲ್ಲಿ ಮಾತ್ರವಲ್ಲದೆ ಭಾರತದಾದ್ಯಂತ ಮಹಿಳೆಯರ ಘನತೆಗೆ ಧಕ್ಕೆ ತಂದಿದ್ದಾರೆ ಮತ್ತು ಮಹಿಳೆಯರ ಆರೋಗ್ಯದ ಸಮಸ್ಯೆಯನ್ನು ಕ್ಷುಲ್ಲಕಗೊಳಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಇತ್ತೀಚೆಗೆ ಬಿಹಾರದ ಬಡ ಮಹಿಳೆಯರಿಗೆ ನೈರ್ಮಲ್ಯ ಪ್ಯಾಡ್‌ಗಳನ್ನು ವಿತರಿಸುವ ಅಭಿಯಾನ ಆರಂಭಿಸಿದ್ದು, ಇದನ್ನು ಗುರಿಯಾಗಿಸಿಕೊಂಡು ದುರುದ್ದೇಶದಿಂದ ಈ ರೀತಿ ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.
ದೂರಿನ ಆಧಾರದ ಮೇಲೆ, ಜುಲೈ 6 ರಂದು ಬಿಎನ್‌ಎಸ್ ಮತ್ತು ಐಟಿ ಕಾಯ್ದೆಯ ಸಂಬಂಧಿತ ಸೆಕ್ಷನ್ ಗಳಡಿಯಲ್ಲಿ ರಂಜನ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಬೇಗಂ ಬಜಾರ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement