Mandi miracle: ಹಿಮಾಚಲದಲ್ಲಿ ಮೇಘಸ್ಫೋಟ; ಮಧ್ಯರಾತ್ರಿ ಬೊಗಳುತ್ತಾ 67 ಜನರ ಪ್ರಾಣ ಉಳಿಸಿದ ಹೀರೋ!

ಜೂನ್ 30 ರಂದು ಮಧ್ಯರಾತ್ರಿ ಮಂಡಿಯ ಧರಂಪುರ ಪ್ರದೇಶದ ಸಿಯಾಥಿ ಗ್ರಾಮದಲ್ಲಿ ಭಾರೀ ಮಳೆಯಾಗುತ್ತಿತ್ತು. ಈ ಗ್ರಾಮದ ನರೇಂದ್ರ ಅವರ ನಿವಾಸದ ಎರಡನೇ ಮಹಡಿಯಲ್ಲಿ ಮಲಗಿದ್ದ ಸಾಕು ನಾಯಿ ಇದ್ದಕ್ಕಿದ್ದಂತೆ ಬೊಗಳಲು ಆರಂಭಿಸಿದೆ.
Representational image
ಸಾಂದರ್ಭಿಕ ಚಿತ್ರ
Updated on

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಈ ನಡುವೆ ಮಂಡಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಶ್ವಾನವೊಂದು ಬೊಗಳಿದ್ದರಿಂದ 20 ಕುಟುಂಬಗಳ 67 ಜನರು ಕೊನೆ ಕ್ಷಣದಲ್ಲಿ ಸಾವಿನಿಂದ ಪಾರಾಗಿದ್ದಾರೆ.

ಜೂನ್ 30 ರಂದು ಮಧ್ಯರಾತ್ರಿ ಮಂಡಿಯ ಧರಂಪುರ ಪ್ರದೇಶದ ಸಿಯಾಥಿ ಗ್ರಾಮದಲ್ಲಿ ಭಾರೀ ಮಳೆಯಾಗುತ್ತಿತ್ತು. ಈ ಗ್ರಾಮದ ನರೇಂದ್ರ ಅವರ ನಿವಾಸದ ಎರಡನೇ ಮಹಡಿಯಲ್ಲಿ ಮಲಗಿದ್ದ ಸಾಕುನಾಯಿ ಇದ್ದಕ್ಕಿದ್ದಂತೆ ಬೊಗಳಲು ಆರಂಭಿಸಿದೆ.

ರಾತ್ರಿ ಇಷ್ಟೊಂದು ಬೊಗಳದ ನಾಯಿ ಯಾಕೆ ಈ ಪರಿ ಬೊಗಳುವುದನ್ನು ನೋಡಿ ಅಚ್ಚರಿಗೊಂಡು ನರೇಂದ್ರ ಎಚ್ಚರಗೊಂಡಿದ್ದಾರೆ. ನಂತರ ನಾಯಿ ಬೊಗಳಿದ ಜಾಗದ ಬಳಿ ಹೋದಾಗ ಮನೆಯ ಗೋಡೆಯಲ್ಲಿ ದೊಡ್ಡ ಬಿರುಕು ಮೂಡಿದ್ದನ್ನು ನೋಡಿದ್ದಾರೆ. ನೋಡುತ್ತಿರುವಾಗಲೇ ಆ ಬಿರುಕಿನ ಮೂಲಕ ನೀರು ಮನೆ ಒಳಗಡೆ ಹರಿಯಲು ಆರಂಭಿಸಿತ್ತು.

ನೀರು ಮನೆಗೆ ನುಗ್ಗಿದೆ ಎಂಬದು ಖಾತ್ರಿ ಆಗುತ್ತಿದ್ದಂತೆ ನಾಯಿಯ ಜೊತೆ ಕೆಳಗಡೆ ಮಲಗಿದ್ದ ಕುಟುಂಬದ ಸದಸ್ಯರನ್ನು ಎಬ್ಬಿಸಿ ಕೂಡಲೇ ಹೊರ ಬರುವಂತೆ ಹೇಳಿದ್ದಾರೆ. ನರೇಂದ್ರ ಅವರು ನಂತರ ಸಮೀಪದಲ್ಲಿ ಇದ್ದ ನೆರೆಹೊರೆಯ ನಿವಾಸಿಗಳನ್ನು ಎಬ್ಬಿಸಿ ಮನೆಯಿಂದ ಹೊರ ಬಂದು ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಸೂಚಿಸಿದ್ದಾರೆ.

Representational image
ಮಳೆ ಹೊಡೆತಕ್ಕೆ ತತ್ತರಿಸಿದ ಹಿಮಾಚಲ ಪ್ರದೇಶ: ಮೃತರ ಸಂಖ್ಯೆ 74ಕ್ಕೆ ಏರಿಕೆ

ಈ ಸಂದರ್ಭದಲ್ಲಿ ಜೋರು ಮಳೆ ಸುರಿಯುತ್ತಲೇ ಇತ್ತು. ಕೂಡಲೇ ಗ್ರಾಮಸ್ಥರು ಮನೆಯನ್ನು ತೊರೆದು ಓಡಿದ್ದಾರೆ. ಮನೆ ತೊರೆದ ಕೆಲ ಸಮಯದಲ್ಲಿ ಈ ನಿವಾಸಿಗಳು ಮಲಗಿದ್ದ ಮನೆಗಳು ನೀರಿನಲ್ಲಿ ಕೊಚ್ಚಿ ಹೋಗಿದೆ. ಒಟ್ಟಿನಲ್ಲಿ ನಾಯಿ ಸರಿಯಾದ ಸಮಯದಲ್ಲಿ ಬೊಗಳಿದ್ದರಿಂದ ಸುಮಾರು 67 ಮಂದಿ ಪಾರಾಗಿದ್ದಾರೆ.

ದುರಂತದ ನಂತರ, ಇತರ ಹಳ್ಳಿಗಳ ಜನರು ಸಹಾಯ ನೀಡಿದ್ದಾರೆ. ಸರ್ಕಾರವು ಪೀಡಿತ ಕುಟುಂಬಗಳಿಗೆ ತಕ್ಷಣದ ಪರಿಹಾರವಾಗಿ 10,000 ರೂ.ಗಳನ್ನು ನೀಡುತ್ತಿದೆ.

ಏತನ್ಮಧ್ಯೆ, ಭಾರತ ಹವಾಮಾನ ಇಲಾಖೆ (IMD) ಜುಲೈ 8 ಮತ್ತು 9 ರಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com