ತಾಂತ್ರಿಕ ದೋಷ: ರಾಯ್‌ಪುರಕ್ಕೆ ತೆರಳುತ್ತಿದ್ದ IndiGo ವಿಮಾನ ಇಂದೋರ್‌ಗೆ ವಾಪಸ್

ಇಂದೋರ್‌ನಿಂದ ಹೊರಟು ಸುಮಾರು 60 ನಾಟಿಕಲ್ ಮೈಲುಗಳಷ್ಟು ದೂರ ಕ್ರಮಿಸಿದ ನಂತರ ತಾಂತ್ರಿಕ ದೋಷ ಇರುವುದು ಪೈಲಟ್‌ ಅವರ ಗಮನಕ್ಕೆ ಬಂದಿದೆ.
Indigo Flight (File photo)
ಇಂಡಿಗೋ ವಿಮಾನ (ಸಂಗ್ರಹ ಚಿತ್ರ)
Updated on

ಇಂದೋರ್: 51 ಪ್ರಯಾಣಿಕರನ್ನು ಹೊತ್ತ ಇಂಡಿಗೋ ಇಂದೋರ್-ರಾಯ್‌ಪುರ ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೇ ತಾಂತ್ರಿಕ ದೋಷದಿಂದಾಗಿ ಇಲ್ಲಿನ ವಿಮಾನ ನಿಲ್ದಾಣಕ್ಕೆ ವಾಪಸ್ಸಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂದೋರ್‌ನಿಂದ ಹೊರಟು ಸುಮಾರು 60 ನಾಟಿಕಲ್ ಮೈಲುಗಳಷ್ಟು ದೂರ ಕ್ರಮಿಸಿದ ನಂತರ, ಇಂಡಿಗೊ ಏರ್‌ಲೈನ್ಸ್ ವಿಮಾನ ಸಂಖ್ಯೆ 6E-7295ರಲ್ಲಿ ತಾಂತ್ರಿಕ ದೋಷ ಇರುವುದು ಪೈಲಟ್‌ ಅವರ ಗಮನಕ್ಕೆ ಬಂದಿದೆ ಎಂದು ಇಂದೋರ್‌ನ ದೇವಿ ಅಹಲ್ಯಾಬಾಯಿ ಹೋಳ್ಕರ್ ವಿಮಾನ ನಿಲ್ದಾಣದ ನಿರ್ದೇಶಕಿ ವಿಪಿಂಕಾಂತ್ ಸೇಠ್ ತಿಳಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ 6.35ರ ಸುಮಾರಿಗೆ ಇಂದೋರ್ ವಿಮಾನ ನಿಲ್ದಾಣದಿಂದ ವಿಮಾನ ಹೊರಟಿತು. ಇದಾದ ಕೆಲವು ನಿಮಿಷಗಳಲ್ಲೇ ಪೈಲಟ್ ವಾಯು ಸಂಚಾರ ನಿಯಂತ್ರಣ (ಎಟಿಸಿ) ಘಟಕಕ್ಕೆ ಮಾಹಿತಿ ನೀಡಿದರು. ತಾಂತ್ರಿಕ ಕಾರಣಗಳಿಂದ ವಿಮಾನ ವಾಪಸ್‌ ಆಗಿದೆ ಎಂದು ಹೇಳಿದ್ದಾರೆ.

ವಿಮಾನದಲ್ಲಿ ಯಾವ ರೀತಿ ತಾಂತ್ರಿಕ ದೋಷ ಕಂಡು ಬಂದಿತ್ತು ಎಂಬುದನ್ನು ಅಧಿಕಾರಿಗಳು ತಿಳಿಸಿಲ್ಲ. ಆದರೆ, ವಿಮಾನ ತುರ್ತು ಭೂಸ್ಪರ್ಶ ಮಾಡಿಲ್ಲ ಎಂದು ಹೇಳಿದ್ದಾರೆ.

Indigo Flight (File photo)
ತಾಂತ್ರಿಕ ದೋಷ: ಲೇಹ್‌ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ದೆಹಲಿಗೆ ವಾಪಸ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com