Rahul gandhi
ರಾಹುಲ್ ಗಾಂಧಿFile photo | Express

ಮಹಾರಾಷ್ಟ್ರ ಚುನಾವಣೆಯಲ್ಲಿ 'ಅಕ್ರಮ', ಬಿಹಾರದಲ್ಲಿಯೂ ಅದೇ ರೀತಿ ಆಗಲು ಬಿಡುವುದಿಲ್ಲ: ರಾಹುಲ್ ಗಾಂಧಿ

ಪಾಟ್ನಾದ ಆದಾಯ ತೆರಿಗೆ ಗೋಲಾಂಬರ್‌ನಲ್ಲಿ ಆರಂಭವಾದ ಪ್ರತಿಭಟನಾ ಮೆರವಣಿಗೆಯಲ್ಲಿ ರಾಹುಲ್ ಗಾಂಧಿ ಮತ್ತು ಇತರ ನಾಯಕರು ತೆರೆದ ವಾಹನದಲ್ಲಿ ಇದ್ದರು.
Published on

ಪಾಟ್ನಾ: 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲವಾಗುವಂತೆ 'ಅಕ್ರಮ' ಎಸಗಲಾಗಿದೆ ಮತ್ತು ಕೇಂದ್ರದಲ್ಲಿರುವ ಎನ್‌ಡಿಎ ಸರ್ಕಾರವು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ಚುನಾವಣೆಯಲ್ಲಿ ಅದನ್ನು ಪುನರಾವರ್ತಿಸಲು ಬಯಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ

ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಪಾಟ್ನಾದಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಇಂಡಿಯಾ ಒಕ್ಕೂಟದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, 'ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಳನ್ನು ಬಿಜೆಪಿ ಮತ್ತು ಎನ್‌ಡಿಎಗೆ ಅನುಕೂಲವಾಗುವಂತೆ ಅಕ್ರಮವಾಗಿ ನಡೆಸಲಾಗಿದೆ. ಅವರು ಬಿಹಾರದಲ್ಲಿಯೂ ಅದನ್ನು ಪುನರಾವರ್ತಿಸಲು ಬಯಸುತ್ತಾರೆ. ಆದರೆ, ನಾವು ಅದಕ್ಕೆ ಅವಕಾಶ ನೀಡುವುದಿಲ್ಲ' ಎಂದು ಹೇಳಿದರು.

'ಚುನಾವಣಾ ಆಯೋಗವು ಸಂವಿಧಾನವನ್ನು ರಕ್ಷಿಸಬೇಕು. ಅದು ಬಿಜೆಪಿಯ ಸೂಚನೆಗಳ ಮೇರೆಗೆ ಕಾರ್ಯನಿರ್ವಹಿಸುತ್ತಿದೆ. ಈ ಚುನಾವಣಾ ಆಯುಕ್ತರನ್ನು ಬಿಜೆಪಿ ನಾಮನಿರ್ದೇಶನ ಮಾಡಿದೆ. ಮತದಾರರ ಪಟ್ಟಿಯ ಪರಿಷ್ಕರಣೆಯು ಚುನಾವಣೆಯನ್ನು ಕದಿಯುವ ಪ್ರಯತ್ನವಾಗಿದೆ. ಮತದಾರರ, ವಿಶೇಷವಾಗಿ ಯುವಕರ (ಮತದಾನ) ಹಕ್ಕುಗಳನ್ನು ಕದಿಯಲು ನಾವು ಚುನಾವಣಾ ಆಯೋಗಕ್ಕೆ ಅವಕಾಶ ನೀಡುವುದಿಲ್ಲ' ಎಂದು ಅವರು ಹೇಳಿದರು.

Rahul gandhi
ಬಿಹಾರ ಮತದಾರ ಪಟ್ಟಿ ಪರಿಷ್ಕರಣೆ: ಚುನಾವಣಾ ಆಯೋಗದ ವಿರುದ್ಧದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ಬೆಳಿಗ್ಗೆ ರಾಜ್ಯ ರಾಜಧಾನಿಗೆ ಆಗಮಿಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕರೊಂದಿಗೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಸಿಪಿಐ (ಎಂಎಲ್) ಲಿಬರೇಶನ್ ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಮತ್ತು ಇತರ ವಿರೋಧ ಪಕ್ಷಗಳ ಹಿರಿಯ ನಾಯಕರು ಇದ್ದರು.

ಪಾಟ್ನಾದ ಆದಾಯ ತೆರಿಗೆ ಗೋಲಾಂಬರ್‌ನಲ್ಲಿ ಆರಂಭವಾದ ಪ್ರತಿಭಟನಾ ಮೆರವಣಿಗೆಯಲ್ಲಿ ರಾಹುಲ್ ಗಾಂಧಿ ಮತ್ತು ಇತರ ನಾಯಕರು ತೆರೆದ ವಾಹನದಲ್ಲಿ ಇದ್ದರು.

ಮಹಾಘಟಬಂಧನ ಕರೆ ನೀಡಿದ ರಾಜ್ಯಾದ್ಯಂತ ಬಂದ್‌ಗೆ ವಿರೋಧ ಪಕ್ಷಗಳ ಕಾರ್ಯಕರ್ತರು ಬೀದಿಗಿಳಿದ ಕಾರಣ ಬಿಹಾರದ ಕೆಲವು ಭಾಗಗಳಲ್ಲಿ ರೈಲು ಮತ್ತು ರಸ್ತೆ ಸಂಚಾರ ಅಸ್ತವ್ಯಸ್ತವಾಯಿತು.

ಹೆಚ್ಚಿನ ಸಂಖ್ಯೆಯ ವಿರೋಧ ಪಕ್ಷದ ನಾಯಕರು ಪಾಟ್ನಾದ ಮಹಾತ್ಮ ಗಾಂಧಿ ಸೇತುವಿನ ರಸ್ತೆ ಸಂಚಾರವನ್ನು ಟೈರ್‌ಗಳಿಗೆ ಬೆಂಕಿ ಹಚ್ಚುವ ಮೂಲಕ ತಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com