
ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ರೋಹ್ರುದಲ್ಲಿ 65 ವರ್ಷದ ಅಜ್ಜಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 25 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಪತಿಯ ಮರಣದ ನಂತರ ಒಂಟಿಯಾಗಿ ವಾಸಿಸುತ್ತಿರುವ ಸಂತ್ರಸ್ತೆ, ಜುಲೈ 3ರ ಮಧ್ಯಾಹ್ನ ತನ್ನ ಮೊಮ್ಮಗ ತನ್ನ ಮನೆಗೆ ಬಂದು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಮತ್ತು ಘಟನೆಯನ್ನು ಯಾರಿಗಾದರೂ ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಆಗ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಬಿಎನ್‌ಎಸ್‌ನ ಸೆಕ್ಷನ್ 64(2) (ಅತ್ಯಾಚಾರ), 332(ಬಿ) ಮತ್ತು 351(3) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣವು ಸೂಕ್ಷ್ಮವಾಗಿದ್ದು, ಸಂಪೂರ್ಣವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಪ್ರಣವ್ ಚೌಹಾಣ್ ಹೇಳಿದ್ದಾರೆ.
Advertisement