ಗಣೇಶೋತ್ಸವ 'ಮಹಾರಾಷ್ಟ್ರ ರಾಜ್ಯದ ಹಬ್ಬ' ಎಂದು ಸರ್ಕಾರ ಘೋಷಣೆ

ಇಂದು ವಿಧಾನಸಭೆಯಲ್ಲಿ ರಾಜ್ಯದ ಸಾಂಸ್ಕೃತಿಕ ವ್ಯವಹಾರಗಳ ಸಚಿವ ಆಶಿಶ್ ಶೇಲಾರ್ ಅವರು ಈ ಘೋಷಣೆ ಮಾಡಿದ್ದಾರೆ.
File image
ಗಣೇಶ ಮೂರ್ತಿ ಪ್ರತಿಷ್ಠಾಪನೆ(ಸಂಗ್ರಹ ಚಿತ್ರ)
Updated on

ಮುಂಬೈ: ಮಹಾರಾಷ್ಟ್ರ ಸರ್ಕಾರ ಶತಮಾನದಷ್ಟು ಹಳೆಯದಾದ ಸಾರ್ವಜನಿಕ ಗಣೇಶೋತ್ಸವವನ್ನು "ಮಹಾರಾಷ್ಟ್ರ ರಾಜ್ಯದ ಉತ್ಸವ" ಎಂದು ಅಧಿಕೃತವಾಗಿ ಗುರುವಾರ ಘೋಷಿಸಿದೆ.

ಇಂದು ವಿಧಾನಸಭೆಯಲ್ಲಿ ರಾಜ್ಯದ ಸಾಂಸ್ಕೃತಿಕ ವ್ಯವಹಾರಗಳ ಸಚಿವ ಆಶಿಶ್ ಶೇಲಾರ್ ಅವರು ಈ ಘೋಷಣೆ ಮಾಡಿದ್ದಾರೆ ಎಂದು ಸಂಸ್ಕೃತಿ ಸಚಿವರ ಕಚೇರಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

ವಿಧಾನಸಭೆಯಲ್ಲಿ ಮಾತನಾಡಿದ ಸಚಿವ ಆಶಿಶ್ ಶೇಲಾರ್, "ಸಾರ್ವಜನಿಕ ಗಣೇಶೋತ್ಸವವನ್ನು ಮಹಾರಾಷ್ಟ್ರದಲ್ಲಿ 1893 ರಲ್ಲಿ ಲೋಕಮಾನ್ಯ ತಿಲಕರು ಪ್ರಾರಂಭಿಸಿದರು. ಈ ಹಬ್ಬವು ಸಾಮಾಜಿಕ, ರಾಷ್ಟ್ರೀಯ, ಸ್ವಾತಂತ್ರ್ಯ, ಸ್ವಾಭಿಮಾನ ಮತ್ತು ಭಾಷಾ ಹೆಮ್ಮೆಯಲ್ಲಿ ಆಳವಾಗಿ ಬೇರೂರಿದೆ. ಇದು ಇಂದಿಗೂ ಅದೇ ಉತ್ಸಾಹದಲ್ಲಿ ಮುಂದುವರೆದಿದೆ. ಇದು ಮಹಾರಾಷ್ಟ್ರಕ್ಕೆ ಹೆಮ್ಮೆ ಮತ್ತು ಗೌರವದ ಸಂಕೇತವಾಗಿದೆ" ಎಂದರು.

ಈ ಹಬ್ಬದ ಸಾಂಸ್ಕೃತಿಕ ಮಹತ್ವ ಮತ್ತು ಪರಂಪರೆಯನ್ನು ಸಂರಕ್ಷಿಸಲು ಮತ್ತು ಉತ್ತೇಜಿಸಲು ಮಹಾರಾಷ್ಟ್ರ ಸರ್ಕಾರ ಬದ್ಧವಾಗಿದೆ ಎಂದು ಅವರು ಒತ್ತಿ ಹೇಳಿದರು.

File image
ಗಣೇಶ ಹಬ್ಬ ಸಮಯದಲ್ಲಿ ಪಿಒಪಿ ಮೂರ್ತಿಗಳ ಮಾರಾಟ, ಬಳಕೆ, ವಿಸರ್ಜನೆಗೆ ನಿಷೇಧ: ರಾಜ್ಯ ಪರಿಸರ ಇಲಾಖೆ ಆದೇಶ

ಕೆಲವು ವ್ಯಕ್ತಿಗಳು, ವಿವಿಧ ಕಾರಣಗಳಿಗಾಗಿ, ವಿವಿಧ ನ್ಯಾಯಾಲಯಗಳಲ್ಲಿ ಗಣೇಶೋತ್ಸವದ ಸಾರ್ವಜನಿಕ ಆಚರಣೆಯನ್ನು ಪ್ರಶ್ನಿಸಲು ಪ್ರಯತ್ನಿಸಿದರು. ಆದರೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ಅಜಿತ್ ದಾದಾ ಪವಾರ್ ನೇತೃತ್ವದ ಮಹಾಯುತಿ ಸರ್ಕಾರವು ಅಂತಹ ಎಲ್ಲಾ ನಿರ್ಬಂಧಗಳು ಮತ್ತು ಕಾನೂನು ಅಡೆತಡೆಗಳನ್ನು ನಿವಾರಿಸಲು ತ್ವರಿತವಾಗಿ ಕಾರ್ಯನಿರ್ವಹಿಸಿದೆ ಎಂದರು.

ಗಣೇಶೋತ್ಸವಕ್ಕೆ ಅಗತ್ಯ ಮೂಲಸೌಕರ್ಯ ಮತ್ತು ಪೊಲೀಸ್ ಭದ್ರತೆ ಒದಗಿಸಲಾಗುವುದು. ಅಲ್ಲದೆ ಪುಣೆ, ಮುಂಬೈ ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಅದ್ಧೂರಿ ಗಣೇಶೋತ್ಸವ ಆಚರಣೆಗೆ ಆರ್ಥಿಕ ನೆರವನ್ನೂ ಸರ್ಕಾರ ನೀಡಲಿದೆ ಎಂದು ಸಚಿವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com