One Nation One Election ಮಸೂದೆಯಲ್ಲಿ ಚುನಾವಣಾ ಆಯೋಗಕ್ಕೆ ಹೆಚ್ಚುವರಿ ಅಧಿಕಾರದ ಬಗ್ಗೆ ಮಾಜಿ ಸಿಜೆಐಗಳ ಕಳವಳ!

'ಒಂದು ದೇಶ, ಒಂದು ಚುನಾವಣೆ' ಮಸೂದೆಯ ಕೆಲವು ನಿಬಂಧನೆಗಳ ಬಗ್ಗೆ, ವಿಶೇಷವಾಗಿ ಚುನಾವಣಾ ಆಯೋಗಕ್ಕೆ ಹೆಚ್ಚುವರಿ ಅಧಿಕಾರವನ್ನು ನೀಡುವ ನಿಬಂಧನೆಗಳ ಬಗ್ಗೆ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿಗಳು (ಸಿಜೆಐ) ಡಿ.ವೈ. ಚಂದ್ರಚೂಡ್ ಮತ್ತು ಜೆ.ಎಸ್. ಖೇಹರ್ ಕಳವಳ ವ್ಯಕ್ತಪಡಿಸಿದ್ದಾರೆ.
ಡಿವೈ ಚಂದ್ರಚೂಡ್
ಡಿವೈ ಚಂದ್ರಚೂಡ್
Updated on

ನವದೆಹಲಿ: 'ಒಂದು ದೇಶ, ಒಂದು ಚುನಾವಣೆ' ಮಸೂದೆಯ ಕೆಲವು ನಿಬಂಧನೆಗಳ ಬಗ್ಗೆ, ವಿಶೇಷವಾಗಿ ಚುನಾವಣಾ ಆಯೋಗಕ್ಕೆ ಹೆಚ್ಚುವರಿ ಅಧಿಕಾರವನ್ನು ನೀಡುವ ನಿಬಂಧನೆಗಳ ಬಗ್ಗೆ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿಗಳು (ಸಿಜೆಐ) ಡಿ.ವೈ. ಚಂದ್ರಚೂಡ್ ಮತ್ತು ಜೆ.ಎಸ್. ಖೇಹರ್ ಕಳವಳ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ, ಈ ಮಸೂದೆ ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರು, ಅವಧಿ ಪೂರ್ಣಗೊಳ್ಳುವ ಮೊದಲು ವಿಧಾನಸಭೆಗಳನ್ನು ವಿಸರ್ಜಿಸಿದರೆ ಅದು ಸಾಂವಿಧಾನಿಕ ಎಂಬ ಪ್ರಶ್ನೆಯನ್ನು ಎತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದರ ಬಗ್ಗೆ, ಚುನಾವಣಾ ಆಯೋಗ ಮಾತ್ರವಲ್ಲದೆ ಸಂಸತ್ತು ಅಥವಾ ಕೇಂದ್ರ ಸರ್ಕಾರವೂ ಈ ನಿರ್ಧಾರದಲ್ಲಿ ಪಾತ್ರ ವಹಿಸಬೇಕು ಎಂದು ಖೇಹರ್ ಸೂಚಿಸಿದರು.

ಸೆಕ್ಷನ್ 82A (5) ಪ್ರಕಾರ, ಲೋಕಸಭಾ ಚುನಾವಣೆಯ ಜೊತೆಗೆ ವಿಧಾನಸಭೆಗೆ ಚುನಾವಣೆ ನಡೆಸಲು ಸಾಧ್ಯವಾಗದಿದ್ದರೆ, ಆ ವಿಧಾನಸಭೆಯ ಚುನಾವಣೆಯನ್ನು ನಂತರ ನಡೆಸುವಂತೆ ಚುನಾವಣಾ ಆಯೋಗವು ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಬಹುದು. ಈ ಕುರಿತು ಮಾತನಾಡಿದ ಮಾಜಿ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್, ದೇಶದಲ್ಲಿ ತುರ್ತು ಪರಿಸ್ಥಿತಿ ಉಂಟಾದರೆ ಚುನಾವಣಾ ಪ್ರಕ್ರಿಯೆಯನ್ನು ಹೇಗೆ ನಡೆಸಲಾಗುವುದು ಎಂಬುದನ್ನು ಮಸೂದೆಯಲ್ಲಿ ಸ್ಪಷ್ಟವಾಗಿ ಹೇಳಬೇಕು ಎಂದು ಸೂಚಿಸಿದರು.

ವಿಧಾನಸಭೆಯ ಉಳಿದ ಅವಧಿ ಕೆಲವೇ ತಿಂಗಳುಗಳಾಗಿದ್ದರೆ, ಆ ಪರಿಸ್ಥಿತಿಯಲ್ಲಿ ಚುನಾವಣೆ ನಡೆಸುವುದು ಸೂಕ್ತವೇ ಅಥವಾ ಇಲ್ಲವೇ ಎಂಬುದನ್ನು ಮಸೂದೆಯಲ್ಲಿ ಸ್ಪಷ್ಟಪಡಿಸಬೇಕು ಎಂಬ ಮತ್ತೊಂದು ಕಳವಳವೂ ವ್ಯಕ್ತವಾಯಿತು.

ಡಿವೈ ಚಂದ್ರಚೂಡ್
ಮಹಾರಾಷ್ಟ್ರ: ಶಿವಸೇನಾ ಸಚಿವನ ಕೊಠಡಿಯಲ್ಲಿ ಕಂತೆ ಕಂತೆ ನೋಟು! ವಿಡಿಯೋ ವೈರಲ್; ರಾಜೀನಾಮೆಗೆ ವಿಪಕ್ಷಗಳ ಒತ್ತಾಯ

ಸಂಸದೀಯ ಸಮಿತಿಯ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಪಿ.ಪಿ. ಚೌಧರಿ ವರದಿಗಾರರೊಂದಿಗೆ ಮಾತನಾಡಿ, ಸಮಿತಿಯು ವಿವಿಧ ತಜ್ಞರ ಅಭಿಪ್ರಾಯಗಳನ್ನು ಸ್ವಾಗತಿಸುತ್ತದೆ. ಎಲ್ಲಾ ವಿಷಯಗಳನ್ನು ಗಂಭೀರವಾಗಿ ಚರ್ಚಿಸುತ್ತದೆ ಎಂದು ಹೇಳಿದರು. ರಾಷ್ಟ್ರ ನಿರ್ಮಾಣಕ್ಕೆ ಇದು ಅಪರೂಪದ ಅವಕಾಶವಾಗಿದ್ದು, ಸಮಿತಿಯ ಗುರಿ ಈ ಮಸೂದೆಯನ್ನು ಸುಧಾರಿಸುವುದು, ಅದನ್ನು ಇರುವಂತೆಯೇ ಹಿಂದಿರುಗಿಸುವುದು ಅಲ್ಲ ಎಂದು ಅವರು ಹೇಳಿದರು.

ಇಲ್ಲಿಯವರೆಗೆ, ನಾಲ್ಕು ಮಾಜಿ ಮುಖ್ಯ ನ್ಯಾಯಮೂರ್ತಿಗಳು ಮತ್ತು ಹಲವಾರು ಕಾನೂನು ತಜ್ಞರು ಸಮಿತಿಯ ಮುಂದೆ ಹಾಜರಾಗಿದ್ದಾರೆ. ಸಮಿತಿಯು ಶುಕ್ರವಾರ ತನ್ನ ಎಂಟನೇ ಸಭೆಯನ್ನು ನಡೆಸಿತು. ಇದರಲ್ಲಿ ಮಾಜಿ ರಾಜ್ಯಸಭಾ ಸಂಸದ ಮತ್ತು ಹಿರಿಯ ವಕೀಲ ಇ.ಎಂ. ಸುದರ್ಶನ್ ನಾಚಿಯಪ್ಪನ್ ಕೂಡ ತಮ್ಮ ಸಲಹೆಗಳನ್ನು ಹಂಚಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com