ಕೊಲ್ಕತ್ತಾ: IIM ಬಾಲಕರ ಹಾಸ್ಟೆಲ್ ಒಳಗೆ ಮಹಿಳೆಯ ಮೇಲೆ ಅತ್ಯಾಚಾರ; ವಿದ್ಯಾರ್ಥಿ ಬಂಧನ
ಕೊಲ್ಕೋತಾ: ಕೊಲ್ಕೋತಾದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಓದುತ್ತಿರುವ ಮಹಿಳೆಯ ಮೇಲೆ ಬಿಸಿನೆಸ್ ಸ್ಕೂಲ್‌ನ ಹಾಸ್ಟೆಲ್ ಒಳಗೆ ವಿದ್ಯಾರ್ಥಿಯೊಬ್ಬ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹರಿದೇವ್‌ಪುರ ಪೊಲೀಸ್ ಠಾಣೆಯಲ್ಲಿ ಮಹಿಳೆ ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಐಐಎಂ-ಕೊಲ್ಕತ್ತಾದ ಬಾಲಕರ ಹಾಸ್ಟೆಲ್ ಒಳಗೆ ಶುಕ್ರವಾರ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತನ್ನನ್ನು ಕೌನ್ಸೆಲಿಂಗ್ ಸೆಷನ್‌ಗಾಗಿ ಹಾಸ್ಟೆಲ್‌ಗೆ ಕರೆಸಲಾಗಿತ್ತು ಎಂದು ಮಹಿಳೆ ಎಫ್‌ಐಆರ್‌ನಲ್ಲಿ ಹೇಳಿದ್ದಾರೆ. ಮಹಿಳೆ ಕ್ಯಾಂಪಸ್ ನ ವಿದ್ಯಾರ್ಥಿನಿಯಲ್ಲ, ಹಾಸ್ಟೆಲ್ ಅಥವಾ ಕಾಲೇಜು ರಿಜಿಸ್ಟರ್ ನಲ್ಲಿ ಆಕೆ ಭೇಟಿಯ ವಿಷಯ ಹೆಸರು ದಾಖಲಾಗಿಲ್ಲ. ಹಾಸ್ಟೆಲ್‌ನಲ್ಲಿ ಪಿಜ್ಜಾ ಮತ್ತು ಡ್ರಗ್ಸ್ ಬೆರೆಸಿದ ಪಾನೀಯ ಸೇವಿಸಿದ ನಂತರ ಆಕೆ ಪ್ರಜ್ಞಾಹೀನಳಾದಳು. ಪ್ರಜ್ಞೆ ಮರಳಿದ ನಂತರ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ತಿಳಿದುಕೊಂಡಿದ್ದಾಗಿ ಮಹಿಳೆ ತಿಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿಯು ಈ ವಿಷಯವನ್ನು ಯಾರಿಗಾದರೂ ಬಹಿರಂಗಪಡಿಸಿದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ಅಧಿಕಾರಿ ಹೇಳಿದರು. ಆರೋಪಿ ವಿದ್ಯಾರ್ಥಿಯನ್ನು ನಿನ್ನೆ ರಾತ್ರಿ ಬಂಧಿಸಲಾಯಿತು ಎಂದು ಅವರು ಹೇಳಿದರು. ಕೋಲ್ಕತ್ತಾದ ಕಾನೂನು ಕಾಲೇಜಿನೊಳಗೆ ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಸುಮಾರು ಹದಿನೈದು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ