
ಮೀರತ್: ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಅವಹೇಳನಕಾರಿಯ ಹೇಳಿಕೆಯ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಆರೋಪದ ಮೇಲೆ ಉತ್ತರ ಪ್ರದೇಶದ ಮೀರತ್ ನಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ರಸೂಲ್‌ಪುರ ಔರಂಗಾಬಾದ್ ನಿವಾಸಿ ಇರ್ಷಾದ್ ಖಾನ್ (26) ಎಂದು ಗುರುತಿಸಲಾಗಿದೆ.
ಈ ಸಂಬಂಧ ಜುಲೈ 10 ರಂದು ಮೈನ್‌ಪಾಲ್ ಚೌಹಾಣ್ ಎಂಬ ವ್ಯಕ್ತಿ ಭಾವನ್‌ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಭಾವನ್‌ಪುರ ಠಾಣಾಧಿಕಾರಿ ಕುಲದೀಪ್ ಸಿಂಗ್ ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಇರ್ಷಾದ್ ಖಾನ್ ಅವರು ಪ್ರಧಾನಿ ಮತ್ತು ಮುಖ್ಯಮಂತ್ರಿ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ. ಈ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.
Advertisement