
ಕೋಝಿಕೋಡ್: ಯೆಮೆನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನರ್ಸ್‌ಗೆ ರಕ್ಷಣೆಗೆ ಪ್ರಭಾವಿ ಸುನ್ನಿ ಮುಸ್ಲಿಂ ಧರ್ಮಗುರು ಕಾಂತಪುರಂ ಎ ಪಿ ಅಬೂಬಕರ್ ಮುಸ್ಲಿಯಾರ್ ಅವರು ಧಾವಿಸಿದ್ದು, "ಸಾಧ್ಯವಾದ ಎಲ್ಲಾ ಪ್ರಯತ್ನಗಳನ್ನು" ಮಾಡುತ್ತಿದ್ದಾರೆ ಎಂದು ಸೋಮವಾರ ತಿಳಿಸಲಾಗಿದೆ.
ಶೇಖ್ ಅಬುಬಕರ್ ಅಹ್ಮದ್ ಎಂದು ಅಧಿಕೃತವಾಗಿ ಕರೆಯಲ್ಪಡುವ ಮತ್ತು ಭಾರತದ ಗ್ರ್ಯಾಂಡ್ ಮುಫ್ತಿ ಎಂಬ ಬಿರುದನ್ನು ಹೊಂದಿರುವ 94 ವರ್ಷದ ಮುಸ್ಲಿಯಾರ್, ಯೆಮೆನ್‌ನ ಧಾರ್ಮಿಕ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದಾರೆ. ಅವರು 2017ರಲ್ಲಿ ಅವರು ಕೊಲೆಯಾದ ಯೆಮೆನ್ ಪ್ರಜೆ ತಲಾಲ್ ಅಬ್ದೋ ಮಹ್ದಿ ಅವರ ಕುಟುಂಬದೊಂದಿಗೆ ಸಂಧಾನ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದೇ ಜುಲೈ 16ರಂದು ಕೊಲೆ ಪ್ರಕರಣದಲ್ಲಿ ನಿಮಿಷಾ ಪ್ರಿಯಾ ಅವರನ್ನು ಗಲ್ಲಿಗೇರಿಸಲಾಗುತ್ತಿದೆ.
ಬ್ಲಡ್ ಮನಿ(ಮೃತರ ಕುಟುಂಬಕ್ಕೆ ಅವರು ಕೇಳಿದಷ್ಟು ಆರ್ಥಿಕ ಸಹಾಯ ನೀಡುವುದು) ಕುರಿತು ಮಾತುಕತೆಗಳು ನಡೆದಿವೆ ಮತ್ತು ವಿವರಗಳನ್ನು ಕೇರಳದಲ್ಲಿ ಸಂಬಂಧಪಟ್ಟವರಿಗೆ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆದಾಗ್ಯೂ, ಮಾತುಕತೆ ಯಾವ ಹಂತದಲ್ಲಿದೆ ಎಂಬ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ.
ಯೆಮೆನ್‌ನಲ್ಲಿ ಶರಿಯಾ ಕಾನೂನಿನಡಿಯಲ್ಲಿ, ಬ್ಲಡ್ ಮನಿ ಹತ್ಯೆಯಾದ ವ್ಯಕ್ತಿಯ ಕುಟುಂಬಕ್ಕೆ ನೀಡಲಾಗುವ ಕಾನೂನುಬದ್ಧವಾದ ಆರ್ಥಿಕ ಪರಿಹಾರವಾಗಿದೆ.
ಏತನ್ಮಧ್ಯೆ, ಮಾತುಕತೆಗಳನ್ನು ಸುಗಮಗೊಳಿಸಲು ಇಲ್ಲಿನ ಮುಸ್ಲಿಯಾರ್ ಅವರ ಪ್ರಧಾನ ಕಚೇರಿಯಲ್ಲಿ, ಪ್ರತ್ಯೇಕ ಕಚೇರಿಯನ್ನು ತೆರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪಾಲಕ್ಕಾಡ್ ಜಿಲ್ಲೆಯ ನಿಮಿಷಾ ಪ್ರಿಯಾ ಅವರಿಗೆ 2020 ರಲ್ಲಿ ಮರಣದಂಡನೆ ವಿಧಿಸಲಾಯಿತು ಮತ್ತು ಅವರ ಅಂತಿಮ ಮೇಲ್ಮನವಿಯನ್ನು 2023 ರಲ್ಲಿ ತಿರಸ್ಕರಿಸಲಾಯಿತು.
Advertisement