

ಪಾಟ್ನಾ: ಈ ವಾರ ಬಿಹಾರದಲ್ಲಿ ಭಾರಿ ಮಳೆಯಾಗುತ್ತಿದ್ದು, ಸಿಡಿಲು ಬಡಿದು ಕನಿಷ್ಠ 33 ಜನ ಸಾವನ್ನಪ್ಪಿದ್ದಾರೆ ಮತ್ತು ಡಜನ್ಗಟ್ಟಲೆ ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಬಿಹಾರದಲ್ಲಿ ಬುಧವಾರ ಮತ್ತು ಗುರುವಾರದ ನಡುವೆ ಬಿರುಗಾಳಿ ಸಹಿತ ಭೀಕರ ಮಳೆಯಲ್ಲಿ ಈ ಸಾವುಗಳು ಸಂಭವಿಸಿವೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ ಪ್ರಕಟಣೆ ತಿಳಿಸಿದೆ.
ಸಿಡಿಲು ಬಡಿದು ಮೃತಪಟ್ಟವರಲ್ಲಿ ಹೆಚ್ಚಿನವರು ರೈತರು ಮತ್ತು ಕಾರ್ಮಿಕರಾಗಿದ್ದ, ರಾಜ್ಯದ ಕೆಲವು ಭಾಗಗಳಲ್ಲಿ ಭಾರಿ ಮಳೆ ಮತ್ತು ಮಿಂಚಿನ ಮುನ್ಸೂಚನೆ ನೀಡಲಾಗಿದೆ.
"ಮಿಂಚಿನ ಬಗ್ಗೆ ಎಚ್ಚರಿಕೆ ನೀಡಿದ ನಂತರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ" ನಿರ್ದೇಶಿಸಲಾಗಿದೆ ಎಂದು ಬಿಹಾರ ರಾಜ್ಯ ವಿಪತ್ತು ನಿರ್ವಹಣಾ ಸಚಿವ ವಿಜಯ್ ಕುಮಾರ್ ಮಂಡಲ್ AFP ಗೆ ತಿಳಿಸಿದ್ದಾರೆ.
ಸಿಡಿಲಿನಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ರಾಜ್ಯ ಸರ್ಕಾರ ಒಟ್ಟು 4 ಮಿಲಿಯನ್ ರೂಪಾಯಿ($4,600) ಪರಿಹಾರ ಘೋಷಿಸಿದೆ.
2024 ರಲ್ಲಿ ಕನಿಷ್ಠ 243 ಜನ ಸಿಡಿಲಿನಿಂದ ಸಾವನ್ನಪ್ಪಿದ್ದರು ಮತ್ತು ಅದರ ಹಿಂದಿನ ವರ್ಷ 275 ಜನ ಸಾವನ್ನಪ್ಪಿದರು ಎಂದು ರಾಜ್ಯ ಸರ್ಕಾರ ತಿಳಿಸಿದೆ.
Advertisement