ದೇವೇಂದ್ರ ಫಡ್ನವೀಸ್TNIE
ದೇಶ
ಇಸ್ಲಾಂಪುರವನ್ನು ಈಶ್ವರಪುರ ಎಂದು ಮರುನಾಮಕರಣ ಮಾಡಿದ ಮಹಾರಾಷ್ಟ್ರ ಸರ್ಕಾರ
ಮಳೆಗಾಲ ಅಧಿವೇಶನದ ಕೊನೆಯ ದಿನವಾದ ಇಂದು ರಾಜ್ಯ ವಿಧಾನಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಛಗನ್ ಭುಜಬಲ್ ಅವರು ಈ ಘೋಷಣೆ ಮಾಡಿದರು.
ಸಾಂಗ್ಲಿ: ಮಹಾರಾಷ್ಟ್ರ ಸರ್ಕಾರ, ಸಾಂಗ್ಲಿ ಜಿಲ್ಲೆಯ ಇಸ್ಲಾಂಪುರವನ್ನು ಈಶ್ವರಪುರ ಎಂದು ಮರುನಾಮಕರಣ ಮಾಡಲಾಗುತ್ತಿದೆ ಎಂದು ಶುಕ್ರವಾರ ಘೋಷಿಸಿದೆ.
ಮಳೆಗಾಲ ಅಧಿವೇಶನದ ಕೊನೆಯ ದಿನವಾದ ಇಂದು ರಾಜ್ಯ ವಿಧಾನಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಛಗನ್ ಭುಜಬಲ್ ಅವರು ಈ ಘೋಷಣೆ ಮಾಡಿದರು.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಇಸ್ಲಾಂಪುರವನ್ನು ಈಶ್ವರಪುರ ಎಂದು ಮರುನಾಮಕರಣ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯ ಸರ್ಕಾರ ಸಂಪುಟದ ಈ ನಿರ್ಧಾರವನ್ನು ಅನುಮೋದನೆಗಾಗಿ ಕೇಂದ್ರಕ್ಕೆ ಕಳುಹಿಸಲಿದೆ ಎಂದು ಅವರು ಹೇಳಿದರು.
ಹಿಂದೂತ್ವ ಸಂಘಟನೆಯಾದ ಶಿವ ಪ್ರತಿಷ್ಠಾನವು ಇಸ್ಲಾಂಪುರ ಹೆಸರನ್ನು ಈಶ್ವರಪುರ ಎಂದು ಬದಲಾಯಿಸಬೇಕೆಂದು ಒತ್ತಾಯಿಸಿ ಸಾಂಗ್ಲಿ ಕಲೆಕ್ಟರೇಟ್‌ಗೆ ಮನವಿ ಸಲ್ಲಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಹೆಸರು ಬದಲಾವಣೆಯ ಬೇಡಿಕೆ 1986 ರಿಂದ ಬಾಕಿ ಇತ್ತು ಎಂದು ಇಸ್ಲಾಂಪುರದ ಶಿವಸೇನಾ ನಾಯಕರೊಬ್ಬರು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ