
ರಾಯಪುರ: ಛತ್ತೀಸ್ ಗಢದ ನಾರಾಯಣಪುರ ಜಿಲ್ಲೆಯ ಅಬುಜ್‌ಮದ್‌ನ ಗುಡ್ಡಗಾಡು ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಆರು ಮಂದಿ ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ ಎಂದು ಬಸ್ತಾರ್ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ನಕ್ಸಲೀಯರ ಬಗ್ಗೆ ದೊರೆತ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಅಬುಜ್‌ಮದ್‌ನ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳ ಜಂಟಿ ತಂಡ ಶೋಧ ಕಾರ್ಯಾಚರಣೆ ಆರಂಭಿಸಿದ್ದು, ಶುಕ್ರವಾರ ಮಧ್ಯಾಹ್ನ ಗುಂಡಿನ ಚಕಮಕಿ ನಡೆದಿದೆ. ಎನ್‌ಕೌಂಟರ್ ಸ್ಥಳದಿಂದ ಇದುವರೆಗೆ ಆರು ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆದರೆ ಭದ್ರತಾ ಪಡೆಗಳಿಂದ ಗಾಯಗೊಂಡವರ ಬಗ್ಗೆ ಯಾವುದೇ ಮಾಹಿತಿ ಹೊರ ಬಿದ್ದಿಲ್ಲ. ಸದ್ಯ ಶೋಧ ಕಾರ್ಯಾಚರಣೆ ಮುಂದುವರೆದಿದೆ. ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಸಿಬ್ಬಂದಿ ಸುರಕ್ಷತೆಯ ದೃಷ್ಟಿಯಿಂದ ಹೆಚ್ಚಿನ ವಿವರಗಳನ್ನು ಹಂಚಿಕೊಂಡಿಲ್ಲ.
Advertisement