ಸೈಫ್ ಅಲಿ ಖಾನ್‌ಗೆ ಚಾಕು ಇರಿತ ಪ್ರಕರಣ: FIR 'ಕಾಲ್ಪನಿಕ ಕಥೆ' ಎಂದ ಆರೋಪಿ; ಎರಡನೇ ಬಾರಿ ಜಾಮೀನು ಅರ್ಜಿ ಸಲ್ಲಿಕೆ

ಘಟನೆ ನಡೆದ ಎರಡು ದಿನಗಳ ನಂತರ ಜನವರಿ 19 ರಂದು, ಪೊಲೀಸರು ನೆರೆಯ ಥಾಣೆಯಲ್ಲಿ ಶರೀಫುಲ್ ಇಸ್ಲಾಂ (30) ಎಂಬಾತನನ್ನು ಪೊಲೀಸರು ಬಂಧಿಸಿ ಕರೆತಂದಿದ್ದರು.
Saif Ali Khan stabbing case Accused
ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದ ಆರೋಪಿ
Updated on

ಮುಂಬೈ: ಈ ವರ್ಷದ ಜನವರಿಯಲ್ಲಿ ಮುಂಬೈನಲ್ಲಿರುವ ತಮ್ಮ ನಿವಾಸದಲ್ಲಿ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರನ್ನು ಚಾಕುವಿನಿಂದ ಇರಿದ ಆರೋಪದ ಮೇಲೆ ಬಂಧಿತರಾಗಿರುವ ಬಾಂಗ್ಲಾದೇಶಿ ಪ್ರಜೆ, ತಾನು ನಿರಪರಾಧಿ ಮತ್ತು ತಮ್ಮ ವಿರುದ್ಧದ ಎಫ್‌ಐಆರ್ 'ಕಾಲ್ಪನಿಕ ಕಥೆ' ಎಂದು ಹೇಳಿಕೊಂಡು ಇಲ್ಲಿನ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಜನವರಿ 16ರಂದು ಬಾಂದ್ರಾ ಪ್ರದೇಶದ ಐಷಾರಾಮಿ ಆಪಾರ್ಟ್‌ಮೆಂಟಿನ 12ನೇ ಮಹಡಿಯಲ್ಲಿರುವ 54 ವರ್ಷದ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ್ದ ಆರೋಪಿ ಸೈಫ್ ಮೇಲೆ ಚಾಕುವಿನಿಂದ ದಾಳಿ ಮಾಡಿ ಪರಾರಿಯಾಗಿದ್ದ. ಬಳಿಕ ಸೈಫ್ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಶಸ್ತ್ರಚಿಕಿತ್ಸೆ ನಡೆಸಿ, ಐದು ದಿನಗಳ ನಂತರ ಬಿಡುಗಡೆ ಮಾಡಲಾಗಿತ್ತು.

ಘಟನೆ ನಡೆದ ಎರಡು ದಿನಗಳ ನಂತರ ಜನವರಿ 19 ರಂದು, ಪೊಲೀಸರು ನೆರೆಯ ಥಾಣೆಯಲ್ಲಿ ಶರೀಫುಲ್ ಇಸ್ಲಾಂ (30) ಎಂಬಾತನನ್ನು ಪೊಲೀಸರು ಬಂಧಿಸಿ ಕರೆತಂದಿದ್ದರು.

ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಜುಲೈ 21ಕ್ಕೆ ನಿಗದಿಪಡಿಸಿದ್ದು, ಬಂಧಿತ ಇಸ್ಲಾಂ ಸದ್ಯ ಮುಂಬೈನ ಆರ್ಥರ್ ರಸ್ತೆ ಜೈಲಿನಲ್ಲಿದ್ದಾನೆ.

ವಕೀಲ ವಿಪುಲ್ ದುಶಿಂಗ್ ಮೂಲಕ ಶುಕ್ರವಾರ ಸಲ್ಲಿಸಿದ ಜಾಮೀನು ಅರ್ಜಿಯಲ್ಲಿ, ಆರೋಪಿಯು ತಾನು ನಿರಪರಾಧಿ ಮತ್ತು ಯಾವುದೇ ಹಿಂದಿನ ಕ್ರಿಮಿನಲ್ ದಾಖಲೆಯನ್ನು ಹೊಂದಿಲ್ಲ ಎಂದು ಪ್ರತಿಪಾದಿಸಿದ್ದಾನೆ.

Saif Ali Khan stabbing case Accused
ಸೈಫ್ ಅಲಿ ಖಾನ್ ಮೇಲೆ ದಾಳಿ; 3 ತಿಂಗಳ ನಂತರ ಚಾರ್ಜ್‌ಶೀಟ್ ಸಲ್ಲಿಸಿದ ಮುಂಬೈ ಪೊಲೀಸರು!

ಘಟನೆಯ ತನಿಖೆ ಪ್ರಾಯೋಗಿಕವಾಗಿ ಮುಗಿದಿದ್ದು, ಆರೋಪಪಟ್ಟಿ ಸಲ್ಲಿಸುವುದು ಮಾತ್ರ ಬಾಕಿ ಇದೆ. ಸಿಸಿಟಿವಿ ದೃಶ್ಯಾವಳಿಗಳು ಮತ್ತು ಕರೆ ದಾಖಲೆಗಳು ಸೇರಿದಂತೆ ನಿರ್ಣಾಯಕ ಪುರಾವೆಗಳು ಈಗಾಗಲೇ ಪ್ರಾಸಿಕ್ಯೂಷನ್ ಬಳಿ ಇವೆ. ಸಾಕ್ಷ್ಯಗಳನ್ನು ಹಾಳುಮಾಡುವ ಅಥವಾ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಯಾವುದೇ ಕೆಲಸವನ್ನು ಇಸ್ಲಾಂ ಮಾಡುವುದಿಲ್ಲ ಎಂದು ಅವರ ಅರ್ಜಿಯಲ್ಲಿ ತಿಳಿಸಲಾಗಿದೆ.

'ಸದ್ಯ ದಾಖಲಿಸಿರುವ ಎಫ್‌ಐಆರ್ ದೂರುದಾರರ ಕಾಲ್ಪನಿಕ ಕಥೆಯಾಗಿದೆ. ಆದ್ದರಿಂದ, ಹೀಗಾಗಿ ನಾನು ಜಾಮೀನು ನೀಡುವಂತೆ ಪ್ರಾರ್ಥಿಸುತ್ತೇನೆ' ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಸೆಕ್ಷನ್ 47ರ ನಿರ್ಲಕ್ಷ್ಯವನ್ನು ಉಲ್ಲೇಖಿಸಿ, ಅರ್ಜಿಯು ಬಂಧನದ ಕಾನೂನುಬದ್ಧತೆಯ ಬಗ್ಗೆಯೂ ಕಳವಳ ವ್ಯಕ್ತಪಡಿಸಿದೆ. ನಿಬಂಧನೆಯ ಪ್ರಕಾರ, ಬಂಧಿತ ವ್ಯಕ್ತಿಗೆ ತನ್ನ ಬಂಧನದ ಕಾರಣಗಳು ಮತ್ತು ಜಾಮೀನಿನ ಹಕ್ಕಿನ ಬಗ್ಗೆ ತಿಳಿಸಬೇಕು ಎಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com