
ಮುಂಬೈ: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊಚ್ಚಿಯಿಂದ ಮುಂಬೈಗೆ ಹಾರುತ್ತಿದ್ದ ಏರ್ ಇಂಡಿಯಾ ವಿಮಾನ AI 2744 A320(VT-TYA) ಸೋಮವಾರ ಬೆಳಗ್ಗೆ ಭಾರೀ ಮಳೆಯಿಂದಾಗಿ ಲ್ಯಾಂಡಿಂಗ್ ಸಮಯದಲ್ಲಿ ರನ್‌ವೇಯಿಂದ ಹೊರಗೆ ಜಾರಿದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಹಾನಿಯಾಗಿಲ್ಲ.
ವಿಮಾನವು ಗೇಟ್‌ಗೆ ಸುರಕ್ಷಿತವಾಗಿ ತಲುಪಿದೆ. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಯಾವುದೇ ಗಾಯಗಳಿಲ್ಲದೆ ಇಳಿದರು. ವಿಮಾನವನ್ನು ತಾಂತ್ರಿಕ ಮೌಲ್ಯಮಾಪನಕ್ಕಾಗಿ ಒಳಪಡಿಸಲಾಗಿದೆ. ಡಿಜಿಸಿಎ ತಂಡ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
"ಜುಲೈ 21, 2025 ರಂದು ಕೊಚ್ಚಿಯಿಂದ ಮುಂಬೈಗೆ ಹಾರುತ್ತಿದ್ದ ವಿಮಾನ AI2744 ಲ್ಯಾಂಡಿಂಗ್ ಸಮಯದಲ್ಲಿ ಭಾರೀ ಮಳೆಯಿಂದ ಲ್ಯಾಂಡಿಂಗ್ ನಂತರ ರನ್‌ವೇ ಜಾರಿತು. ಆದರೂ ವಿಮಾನವು ಸುರಕ್ಷಿತವಾಗಿ ಗೇಟ್‌ಗೆ ತಲುಪಿತು ಮತ್ತು ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಗಳು ಸುರಕ್ಷಿತವಾಗಿ ಇಳಿದಿದ್ದಾರೆ" ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.
ತೊಂದರೆಗೊಳಗಾದ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಏರ್ ಇಂಡಿಯಾ ತಿಳಿಸಿದೆ. ಹೇಳಿದರು.
"ವಿಮಾನವನ್ನು ತಪಾಸಣೆಗಾಗಿ ಸ್ಥಗಿತಗೊಳಿಸಲಾಗಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆ ನಮ್ಮ ಪ್ರಮುಖ ಆದ್ಯತೆಯಾಗಿ ಉಳಿದಿದೆ" ಎಂದು ವಕ್ತಾರರು ತಿಳಿಸಿದ್ದಾರೆ.
Advertisement