ಗ್ವಾಲಿಯರ್‌: ಕನ್ವಾರ್ ಯಾತ್ರಿಗಳಿಗೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬದ ನಾಲ್ವರು ಸಾವು

ಕಾರು ಅತಿ ವೇಗವಾಗಿ ಚಲಿಸುತ್ತಿದ್ದಾಗ ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಯಾತ್ರಿಕರಿಗೆ ಡಿಕ್ಕಿ ಹೊಡೆದಿದೆ.
Kanwar Yatra
ಕನ್ವರ್ ಯಾತ್ರೆ (ಸಂಗ್ರಹ ಚಿತ್ರ)
Updated on

ಗ್ವಾಲಿಯರ್: ಗ್ವಾಲಿಯರ್-ಶಿವಪುರಿ ಲಿಂಕ್ ರಸ್ತೆಯಲ್ಲಿ ಮಂಗಳವಾರ ತಡರಾತ್ರಿ ವೇಗವಾಗಿ ಬಂದ ಕಾರೊಂದು ಕನ್ವರ್ ಯಾತ್ರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕನ್ವರ್ ಯಾತ್ರಿಗಳು ಉತ್ತಿಲ ಗ್ರಾಮದ ಭದವ್ನಾ ಕುಂಡ್‌ನಿಂದ ಕಾಲ್ನಡಿಗೆಯಲ್ಲಿ ಹಿಂತಿರುಗುತ್ತಿದ್ದಾಗ ಗ್ವಾಲಿಯರ್‌ನ ಶೀತ್ಲಾ ಮಾತಾ ದೇವಾಲಯದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸರ ಪ್ರಕಾರ, ಇಂದೋರ್ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ(ಆರ್‌ಟಿಒ) ನೋಂದಾಯಿಸಲಾದ ಕಾರು ಅತಿ ವೇಗವಾಗಿ ಚಲಿಸುತ್ತಿದ್ದಾಗ ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಯಾತ್ರಿಕರಿಗೆ ಡಿಕ್ಕಿ ಹೊಡೆದಿದೆ.

Kanwar Yatra
ಕನ್ವಾರ್ ಯಾತ್ರೆ ಮಾರ್ಗದಲ್ಲಿರುವ ಹೋಟೆಲ್‌ಗಳು ಲೈಸೆನ್ಸ್, ನೋಂದಣಿ ಪ್ರದರ್ಶಿಸುವುದು ಕಡ್ಡಾಯ: ಸುಪ್ರೀಂ ಕೋರ್ಟ್

ವಾಹನವು ಯಾತ್ರಿಕರಿಗೆ ಡಿಕ್ಕಿ ಹೊಡೆದು ನಂತರ ಕಂದಕಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಕಂಪು ಪೊಲೀಸ್ ಠಾಣೆಯ ಉಸ್ತುವಾರಿ ಅಮರ್ ಸಿಂಗ್ ಸಿಕಾರ್ವಾರ್ ಅವರು ತಿಳಿಸಿದ್ದಾರೆ.

"ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಯರೋಗ ಆಸ್ಪತ್ರೆಗೆ ಕರೆದೊಯ್ಯಲಾಯಿತು" ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com