Darshan Thugudeepa
ದರ್ಶನ್ ತೂಗುದೀಪ

'ಒಂದು ವಾರದಲ್ಲಿ ಲಿಖಿತ ವಾದ ಸಲ್ಲಿಸಿ': ನಟ ದರ್ಶನ್ ಜಾಮೀನು ಆದೇಶ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದರ್ಶನ್ ಸೇರಿ 7 ಆರೋಪಿಗಳ ಜಾಮೀನನ್ನು ರದ್ದು ಮಾಡುವಂತೆ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್​ಗೆ ಮನವಿ ಮಾಡಿತ್ತು.
Published on

ನವದೆಹಲಿ/ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಹೈಕೋರ್ಟ್ ಜಾಮೀನು ಮೇಲೆ ಬಿಡುಗಡೆ ಹೊಂದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳ ಜಾಮೀನು ರದ್ದು ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ.

ದರ್ಶನ್ ಸೇರಿ 7 ಆರೋಪಿಗಳ ಜಾಮೀನನ್ನು ರದ್ದು ಮಾಡುವಂತೆ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್​ಗೆ ಮನವಿ ಮಾಡಿತ್ತು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಈಗ ತೀರ್ಪನ್ನು ಕಾಯ್ದಿರಿಸಿದೆ. 10 ದಿನಗಳ ಬಳಿಕವಷ್ಟೇ ದರ್ಶನ್ ಜಾಮೀನು ಅರ್ಜಿ ಬಗ್ಗೆ ತೀರ್ಪು ನೀಡುವುದಾಗಿ ಕೋರ್ಟ್ ಹೇಳಿದೆ.

ಕೋರ್ಟ್​​ನಲ್ಲಿ ಇಂದು ಆಗಿದ್ದೇನು?

ರೇಣುಕಾ ಸ್ವಾಮಿ ಕೊಲೆ ಕೇಸ್​​ನಲ್ಲಿ ದರ್ಶನ್​ಗೆ ಜಾಮೀನು ನೀಡಿ ಹೈಕೋರ್ಟ್ ಕಳೆದ ವರ್ಷ ಆದೇಶ ನೀಡಿತ್ತು. ಈ ಆದೇಶವನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್​ನಲ್ಲಿ ಪ್ರಶ್ನೆ ಮಾಡಿತ್ತು.ಅರ್ಜಿಯನ್ನು ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠ ವಿಚಾರಣೆ ನಡೆಸಿತು.

ಇಂದು ರಾಜ್ಯ ಸರ್ಕಾರದ ಪರ ವಕೀಲ ಸಿದ್ಧಾರ್ಥ್ ಲೂಥ್ರಾ ಮೊದಲು ವಾದ ಮಂಡಿಸಿದರು. ಇದು ಭೀಕರ ಕೊಲೆ ಕೇಸ್. ಏಳು ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಜಾಮೀನು ರದ್ದಾಗಬೇಕು ಎನ್ನುವುದು ನಮ್ಮ ವಾದ. ಅಪಾರ್ಟ್ ಮೆಂಟ್ ಬಳಿ ಡೆಡ್ ಬಾಡಿ ಸಿಕ್ಕಿದೆ ಎಂದು ವಾದಿಸಿ ಏಳು ಆರೋಪಿಗಳ ಜಾಮೀನನ್ನು ಮಾತ್ರ ರದ್ದು ಮಾಡಬೇಕು ಎಂದು ಕೋರಿದರು.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಹೀಗಾಗಿ, ಅವರು ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನೀಡಿ ಎಂದು ಸರ್ಕಾರಿ ಪರ ವಕೀಲರ ನ್ಯಾಯಮೂರ್ತಿಗಳು ಸೂಚಿಸಿದರು. ಆಗ ಸಿದ್ದಾರ್ಥ್ ಲೂತ್ರಾ ಅವರು ಎಲ್ಲವನ್ನೂ ವಿವರವಾಗಿ ಹೇಳಿದರು.

ದರ್ಶನ್ ಹಾಗೂ ಪವಿತ್ರಾ ಸಂಬಂಧ, ದರ್ಶನ್ ಕೊಲೆಯಲ್ಲಿ ಭಾಗಿ ಆಗಿದ್ದಕ್ಕೆ ಸಿಕ್ಕ ಸಾಕ್ಷಿಗಳು, ಜಾಮೀನು ಸಿಕ್ಕ ಬಳಿಕ ಸಾಕ್ಷಿಗಳ ಜೊತೆ ದರ್ಶನ್ ಕಾಣಿಸಿಕೊಂಡಿದ್ದು ಸೇರಿದಂತೆ ಎಲ್ಲವನ್ನೂ ವಿವರಿಸಿದರು.

Darshan Thugudeepa
Darshan Case: ಜಾಮೀನು ಯಾಕೆ ರದ್ದು ಮಾಡಬಾರದು; ದರ್ಶನ್ ಪರ ವಕೀಲರಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ

ಒಂದು ವಾರದಲ್ಲಿ ಲಿಖಿತ ವಾದ ಮಂಡಿಸಿ

ಹೈಕೋರ್ಟ್ ಮಾಡಿದ ತಪ್ಪನ್ನು ನಾವು ಮಾಡಲ್ಲ, ತರಾತುರಿಯಲ್ಲಿ ತೀರ್ಪು ನೀಡಲ್ಲ, ಆರೋಪಿಗಳಿಗೆ ಶಿಕ್ಷೆಯನ್ನೂ ನೀಡಲ್ಲ, ಆರೋಪ ಮುಕ್ತ ಕೂಡ ಮಾಡಲ್ಲ, ನಿಮ್ಮ ವಾದ-ಪ್ರತಿವಾದವನ್ನು ಮೂರು ಪುಟಗಳಲ್ಲಿ ಸಂಕ್ಷಿಪ್ತವಾಗಿ ಒಂದು ವಾರದಲ್ಲಿ ತಿಳಿಸಿ, ಕೂಲಂಕಷ ವಿಚಾರಣೆ ನಡೆಸಬೇಕಿದೆ ಎಂದು ಹೇಳಿ ನ್ಯಾಯಾಧೀಶರು ತೀರ್ಪನ್ನು ಕಾಯ್ದಿರಿಸಿದರು.

ವಿದೇಶದಲ್ಲಿ ದರ್ಶನ್

ನಟ ದರ್ಶನ್ ಅವರು ಇದೇ ತಿಂಗಳು 15ರಂದು ಥೈಲ್ಯಾಂಡ್​ಗೆ ‘ಡೆವಿಲ್’ ಸಿನಿಮಾ ಶೂಟಿಂಗ್​ಗೆ ಹೋಗಿದ್ದು, ಹಾಡಿನ ಚಿತ್ರೀಕರಣ ಹಾಗೂ ಒಂದು ಫೈಟ್ ದೃಶ್ಯದ ಶೂಟ್ ಬಾಕಿ ಇದೆ. ನಾಳೆ ಬೆಂಗಳೂರಿಗೆ ಅವರು ವಾಪಸ್ಸಾಗಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com