
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನ ಗಡಿ ನಿಯಂತ್ರಣ ರೇಖೆಯ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಸಂಭವಿಸಿದ ನೆಲಬಾಂಬ್ ಸ್ಫೋಟದಲ್ಲಿ ಅಗ್ನಿವೀರ್ ಯೋಧ ಹುತಾತ್ಮರಾಗಿದ್ದು, ಜೂನಿಯರ್ ಕಮಾಂಡಿಂಗ್ ಆಫೀಸರ್(ಜೆಸಿಒ) ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ.
ಪೂಂಚ್ ಜಿಲ್ಲೆಯ ಕೃಷ್ಣ ಘಾಟ್ ಸೆಕ್ಟರ್‌ನಲ್ಲಿ ಸೇನಾ ಸಿಬ್ಬಂದಿ ಗಸ್ತು ನಡೆಸುತ್ತಿದ್ದಾಗ ನೆಲಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 7 ಜೆಎಟಿ ರೆಜಿಮೆಂಟ್‌ನ ಅಗ್ನಿವೀರ್ ಲಲಿತ್ ಕುಮಾರ್ ಅವರು ಹುತಾತ್ಮರಾಗಿದ್ದಾರೆ ಎಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ಫೋಟದಲ್ಲಿ, ಮೂವರು ಸೈನಿಕರು ಗಾಯಗೊಂಡಿದ್ದರು. ಲಲಿತ್ ಕುಮಾರ್ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದರು. ಜೆಸಿಒ ಸೇರಿದಂತೆ ಇತರ ಇಬ್ಬರು ಗಾಯಗೊಂಡ ಸೈನಿಕರನ್ನು ವಿಶೇಷ ಚಿಕಿತ್ಸೆಗಾಗಿ ಹತ್ತಿರದ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಸ್ಫೋಟದ ನಂತರ, ಪರಿಸ್ಥಿತಿಯನ್ನು ಪರಿಶೀಲಿಸಲು ಹೆಚ್ಚುವರಿ ಪಡೆಗಳನ್ನು ಸ್ಥಳಕ್ಕೆ ರವಾನಿಸಲಾಗಿದ್ದು, ಭದ್ರತಾ ಅಧಿಕಾರಿಗಳು ನೆಲಬಾಂಬ್ ಸ್ಫೋಟದ ಕಾರಣವನ್ನು ಖಚಿತಪಡಿಸಿಕೊಳ್ಳುತ್ತಿದ್ದಾರೆ.
Advertisement