
ರಾಂಚಿ: ಜಾರ್ಖಂಡ್‌ನಲ್ಲಿ ಶನಿವಾರ ಮುಂಜಾನೆ ನಡೆದ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 3 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಪಿಐ-ಮಾವೋವಾದಿಗಳ ವಿಭಜಿತ ಗುಂಪಾದ ಜಾರ್ಖಂಡ್ ಜನ ಮುಕ್ತಿ ಪರಿಷತ್ (ಜೆಜೆಎಂಪಿ) ಸದಸ್ಯರು ಘಾಗ್ರಾ ಅರಣ್ಯದಲ್ಲಿ ಒಟ್ಟುಗೂಡಿದ್ದು, ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಯೋಜಿಸುತ್ತಿದ್ದರು. ಈ ವೇಳೆ ಇದರ ಮಾಹಿತಿ ಪಡೆದ ಭದ್ರತಾ ಪಡೆಗಳು ಗುಪ್ತಚರ ಮಾಹಿತಿಯನ್ನಾಧರಿಸಿ ದಿಢೀರ್ ದಾಳಿ ನಡೆಸಿವೆ.
ಸುಳಿವಿನ ಮೇರೆಗೆ ಜಾರ್ಖಂಡ್ ಜಾಗ್ವಾರ್ ಮತ್ತು ಗುಮ್ಲಾ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದರು. ಎರಡೂ ಕಡೆಯಿಂದ ಹಲವಾರು ಸುತ್ತಿನ ಗುಂಡುಗಳನ್ನು ಹಾರಿಸಲಾಗಿದೆ. ಈ ವೇಳೆ ಮೂವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಂಡಿನ ದಾಳಿ ನಿಂತ ನಂತರ ಸ್ಥಳದಿಂದ ಒಂದು ಎಕೆ -47 ಮತ್ತು ಎರಡು ಐಎನ್‌ಎಸ್‌ಎಎಸ್ ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಜಾರ್ಖಂಡ್ ಪೊಲೀಸರ ಐಜಿ (ಕಾರ್ಯಾಚರಣೆ) ಮೈಕೆಲ್ ಎಸ್ ರಾಜ್ ತಿಳಿಸಿದ್ದಾರೆ.
Advertisement