AI-171 ವಿಮಾನ ಪತನ: ಏರ್ ಇಂಡಿಯಾದಿಂದ 147 ಕುಟುಂಬಗಳಿಗೆ ಮಧ್ಯಂತರ ಪರಿಹಾರ ಬಿಡುಗಡೆ

ವಿಮಾನಯಾನ ಸಂಸ್ಥೆಯು ಇನ್ನೂ 52 ಕುಟುಂಬಗಳಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ ನಡೆಸುತ್ತಿದೆ.
Air India
ಏರ್ ಇಂಡಿಯಾ ವಿಮಾನ ಪತನ
Updated on

ನವದೆಹಲಿ: ಅಹಮದಾಬಾದ್‌ನಲ್ಲಿ AI-171 ವಿಮಾನ ಪತನದಲ್ಲಿ ಪ್ರಾಣ ಕಳೆದುಕೊಂಡ 147 ಪ್ರಯಾಣಿಕರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಮಧ್ಯಂತರ ಪರಿಹಾರವನ್ನು ಪಾವತಿಸಲಾಗಿದೆ ಎಂದು ಏರ್ ಇಂಡಿಯಾ ಶನಿವಾರ ತಿಳಿಸಿದೆ.

ವಿಮಾನಯಾನ ಸಂಸ್ಥೆಯು ಇನ್ನೂ 52 ಕುಟುಂಬಗಳಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ ನಡೆಸುತ್ತಿದೆ.

ಒಂದು ತಿಂಗಳ ಹಿಂದೆಯೇ ಮೃತರ ಕುಟುಂಬಗಳಿಗೆ ತಕ್ಷಣದ ಆರ್ಥಿಕ ಅಗತ್ಯಗಳನ್ನು ಪೂರೈಸಲು ಏರ್ ಇಂಡಿಯಾ 25 ಲಕ್ಷ ರೂ. ಮಧ್ಯಂತರ ಪರಿಹಾರವನ್ನು ಬಿಡುಗಡೆ ಮಾಡಲು ಪ್ರಾರಂಭಿಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Air India
Air India Plane Crash: 'ತನಿಖೆ ಇನ್ನೂ ಪ್ರಗತಿಯಲ್ಲಿದೆ... ಊಹೆ ಬೇಡ'; ಮಾಧ್ಯಮಗಳ ವರದಿ ಕುರಿತು NTSB ಟೀಕೆ

"ಏರ್ ಇಂಡಿಯಾ ಇದುವರೆಗೆ 229 ಮೃತ ಪ್ರಯಾಣಿಕರಲ್ಲಿ 147 ಜನರ ಕುಟುಂಬಗಳಿಗೆ ಮತ್ತು ಅಪಘಾತ ಸ್ಥಳದಲ್ಲಿ ಪ್ರಾಣ ಕಳೆದುಕೊಂಡ 19 ಜನರ ಕುಟುಂಬಗಳಿಗೆ ಮಧ್ಯಂತರ ಪರಿಹಾರವನ್ನು ಬಿಡುಗಡೆ ಮಾಡಿದೆ. ಇದಲ್ಲದೆ, 52 ಇತರರ ಅಗತ್ಯ ದಾಖಲೆಗಳನ್ನು ಪರಿಶೀಲಿಸಲಾಗಿದ್ದು, ಅವರ ಕುಟುಂಬಗಳಿಗೂ ಮಧ್ಯಂತರ ಪರಿಹಾರವನ್ನು ಹಂತಹಂತವಾಗಿ ಬಿಡುಗಡೆ ಮಾಡಲಾಗುವುದು" ಎಂದು ಏರ್ ಇಂಡಿಯಾ ತಿಳಿಸಿದೆ.

ಈ ಮಧ್ಯಂತರ ಪರಿಹಾರವನ್ನು ಅಂತಿಮ ಪರಿಹಾರಕ್ಕೆ ಅನುಗುಣವಾಗಿ ಸರಿಹೊಂದಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com