
ಹೈದರಾಬಾದ್ : ಶನಿವಾರ ಸಂಭವಿಸಿದ ಅಪಘಾತದಲ್ಲಿ ಆಂಧ್ರಪ್ರದೇಶ ಪೊಲೀಸ್ ಇಲಾಖೆಯ ಡಿಎಸ್‌ಪಿಗಳು ಸಾವನ್ನಪ್ಪಿದ್ದು, ಹಿರಿಯ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ.
ಪೊಲೀಸ್ ಅಧಿಕಾರಿಗಳು ಅಧಿಕೃತ ಕೆಲಸದ ನಿಮಿತ್ತ ವಿಜಯವಾಡದಿಂದ ಹೈದರಾಬಾದ್‌ಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಹೈದರಾಬಾದ್ ಬಳಿಯ ಚೌಟುಪ್ಪಲ್‌ನಲ್ಲಿ ಚಾಲಕ ಹಠಾತ್ ಬ್ರೇಕ್ ಹಾಕಿದಾಗ, ಮುಂದೆ ಹೋಗುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಪ್ರಯತ್ನಿಸುವಾಗ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ನಂತರ, ಕಾರು ರಸ್ತೆಯ ಇನ್ನೊಂದು ಬದಿಗೆ ಬಿದ್ದು, ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಂಧ್ರಪ್ರದೇಶ ಪೊಲೀಸರ ಗುಪ್ತಚರ ಭದ್ರತಾ ವಿಭಾಗದಲ್ಲಿ ಕೆಲಸ ಮಾಡುವ ಇಬ್ಬರು ಪೊಲೀಸ್ ಉಪ ವರಿಷ್ಠಾಧಿಕಾರಿಗಳು (ಡಿಎಸ್‌ಪಿಗಳು) ಅಪಘಾತದಲ್ಲಿ ಸಾವನ್ನಪ್ಪಿದರು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ವಾಹನ ಚಾಲಕ ಗಾಯಗೊಂಡಿದ್ದಾರೆ. ಗಾಯಗೊಂಡವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Advertisement