ಉತ್ತರ ಪ್ರದೇಶ: ಮಹಿಳೆ ಮೇಲೆ ಅತ್ಯಾಚಾರ, ಆಸ್ಪತ್ರೆ ಸಿಬ್ಬಂದಿ ಬಂಧನ

ಗೈಸ್ಡಿ ಪ್ರದೇಶದ ಸುಮಾರು 28 ವರ್ಷದ ಮಹಿಳೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದಾಗ ಆಕೆಗೆ ನಿದ್ರಾಜನಕವನ್ನು ಚುಚ್ಚುಮದ್ದು ನೀಡಿ ಅತ್ಯಾಚಾರವೆಸಗಿದ್ದಾರೆ.
Casual Images
ಸಾಂದರ್ಭಿಕ ಚಿತ್ರ
Updated on

ಬಲರಾಂಪುರ: ಚಿಕಿತ್ಸೆಯ ನೆಪದಲ್ಲಿ ನಿದ್ರಾಜನಕ ಚುಚ್ಚುಮದ್ದನ್ನು ನೀಡಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಖಾಸಗಿ ಆಸ್ಪತ್ರೆಯ ಸಿಬ್ಬಂದಿಯನ್ನು ಬಂಧಿಸಲಾಗಿದೆ.

ಉತ್ತರ ಪ್ರದೇಶದ ಬಲರಾಂಪುರದ ವಿಮ್ಲಾ ವಿಕ್ರಮ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಕುಮಾರ್ ತಿಳಿಸಿದ್ದಾರೆ.

ಗೈಸ್ಡಿ ಪ್ರದೇಶದ ಸುಮಾರು 28 ವರ್ಷದ ಮಹಿಳೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದಾಗ ಆಕೆಗೆ ನಿದ್ರಾಜನಕವನ್ನು ಚುಚ್ಚುಮದ್ದು ನೀಡಿ ಅತ್ಯಾಚಾರವೆಸಗಿದ್ದಾರೆ.

ಪ್ರಜ್ಞೆ ಬಂದ ನಂತರ ಮಹಿಳೆ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಕೆಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಯೋಗೀಶ್ ಪಾಂಡೆ ಎಂಬಾತನನ್ನು ಬಂಧಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ. ಈ ವಿಚಾರದಲ್ಲಿ ವಿಸ್ತೃತ ತನಿಖೆ ನಡೆಯುತ್ತಿದೆ.

Casual Images
ಗೃಹರಕ್ಷಕ ದಳ ನೇಮಕಾತಿ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಮಹಿಳೆ ಮೇಲೆ ಆಂಬ್ಯುಲೆನ್ಸ್ ನಲ್ಲಿ ಅತ್ಯಾಚಾರ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com