
ಲೋನಾವಾಲ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಲೋನಾವಾಲ ಬೆಟ್ಟದ ಪಟ್ಟಣದಲ್ಲಿ 23 ವರ್ಷದ ಯುವತಿಯನ್ನು ಅಪಹರಿಸಿ, ಕಾರಿನಲ್ಲಿ ಅತ್ಯಾಚಾರ ಮಾಡಿ, ನಂತರ ರಸ್ತೆಬದಿಯಲ್ಲಿ ಎಸೆದಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಮುಂಬೈನಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಜನಪ್ರಿಯ ಪ್ರವಾಸಿ ತಾಣ ಲೋನಾವಾಲದ ಮಾವಲ್ ಪ್ರದೇಶದ ತುಂಗಾರ್ಲಿಯಲ್ಲಿ ಶುಕ್ರವಾರ ಮತ್ತು ಶನಿವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ತುಂಗಾರ್ಲಿ ನಿವಾಸಿ 35 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅವರು ತಿಳಿಸಿದರು.
ಮಹಿಳೆಯ ದೂರಿನ ಪ್ರಕಾರ, ಬಂಧಿತ ಆರೋಪಿ ಅದೇ ಪ್ರದೇಶದಲ್ಲಿ ವಾಸಿಸುತ್ತಿದ್ದು, ಶುಕ್ರವಾರ ರಾತ್ರಿ ತಾನು ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಒಂದು ಕಾರು ನನ್ನ ಬಳಿ ಬಂದು ನಿಂತಿತು ಮತ್ತು ಒಬ್ಬ ವ್ಯಕ್ತಿ ತನ್ನನ್ನು ಬಲವಂತವಾಗಿ ಕಾರಿನ ಒಳಗೆ ಕರೆದೊಯ್ದರು ಎಂದು ಆರೋಪಿಸಿದ್ದಾರೆ.
ನಂತರ ಆರೋಪಿಯು ಆಕೆಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು, ಚಲಿಸುವ ಕಾರಿನಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ತುಂಗಾರ್ಲಿಯ ವಿವಿಧ ಸ್ಥಳಗಳಿಗೆ ಕರೆದೊಯ್ಯಲಾಯಿತು ಮತ್ತು ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ ನಂತರ, ಶನಿವಾರ ಬೆಳಗಿನ ಜಾವ ರಸ್ತೆಬದಿಯಲ್ಲಿ ಎಸೆದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.
ನಂತರ ಮಹಿಳೆ ಲೋನಾವಾಲ ನಗರ ಪೊಲೀಸ್ ಠಾಣೆಗೆ ತೆರಳಿ ಆ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
Advertisement