Mahua Moitra
ಮಹುವಾ ಮೊಯಿತ್ರಾ

ಮಹುವಾ ವಿರುದ್ಧ ಪ್ರಶ್ನೆಗಾಗಿ ಲಂಚ ಪ್ರಕರಣ: ಲೋಕಪಾಲಗೆ ವರದಿ ಸಲ್ಲಿಸಿದ ಸಿಬಿಐ

ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಕಳೆದ ವರ್ಷ ಮಾರ್ಚ್ 21 ರಂದು ಮಹುವಾ ಮೊಯಿತ್ರಾ ಮತ್ತು ಉದ್ಯಮಿ ದರ್ಶನ್ ಹಿರಾನಂದಾನಿ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿತ್ತು.
Published on

ನವದೆಹಲಿ: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧದ ಲೋಕಸಭೆಯಲ್ಲಿ ಪ್ರಶ್ನೆ ಕೇಳುವುದಕ್ಕೆ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆ(ಸಿಬಿಐ), ಲೋಕಪಾಲಗೆ ತನ್ನ ವರದಿ ಸಲ್ಲಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಲೋಕಪಾಲದ ಉಲ್ಲೇಖದ ಮೇರೆಗೆ ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಕಳೆದ ವರ್ಷ ಮಾರ್ಚ್ 21 ರಂದು ಮಹುವಾ ಮೊಯಿತ್ರಾ ಮತ್ತು ಉದ್ಯಮಿ ದರ್ಶನ್ ಹಿರಾನಂದಾನಿ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿತ್ತು.

ಪ್ರಕರಣದ ತನಿಖೆ ನಡೆಸಿದ ಸಿಬಿಐ ತನ್ನ ವರದಿಯನ್ನು ಲೋಕಪಾಲಗೆ ಸಲ್ಲಿಸಿದೆ. ಲೋಕಪಾಲ ಮುಂದಿನ ಕ್ರಮವನ್ನು ನಿರ್ಧರಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Mahua Moitra
ಪ್ರಶ್ನೆಗಾಗಿ ಲಂಚ ಪ್ರಕರಣ: ಜ. 25ಕ್ಕೆ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗುವಂತೆ ವಕೀಲ ದೇಹದ್ರಾಯ್ ಗೆ ಸೂಚನೆ

"ಮಹುವಾ ಅವರು ತಮ್ಮ ಸಂಸದೀಯ ಸವಲತ್ತುಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ತಮ್ಮ ಲೋಕಸಭಾ ಲಾಗಿನ್ ವಿವರ ಹಂಚಿಕೊಳ್ಳುವ ಮೂಲಕ ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಉಂಟುಮಾಡಿದ್ದಾರೆ" ಎಂದು ಆರೋಪಿಸಲಾಗಿದೆ.

ಮಹುವಾ ಮೊಯಿತ್ರಾ ಅವರು ಲೋಕಸಭೆಯಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆ ಕೇಳುವುದಕ್ಕೆ ಪ್ರತಿಯಾಗಿ ಭಾರಿ ಮೊತ್ತದ ಹಣ ಹಾಗೂ ದುಬಾರಿ ಉಡುಗೊರೆಗಳನ್ನು ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಲೋಕಪಾಲರಿಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಲೋಕಪಾಲ, ಪ್ರಕರಣದ ತನಿಖೆ ನಡೆಸುವಂತೆ ಸಿಬಿಐಗೆ ನಿರ್ದೇಶನ ನೀಡಿತ್ತು.

ಕೈಗಾರಿಕೋದ್ಯಮಿ ಗೌತಮ್ ಅದಾನಿ ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರರ ವಿರುದ್ಧ ವಾಗ್ದಾಳಿ ನಡೆಸಲು ಮಹುವಾ ಅವರು ದುಬೈ ಮೂಲದ ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಂದ ನಗದು ಮತ್ತು ಉಡುಗೊರೆಗಳನ್ನು ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com