
ಹೈದರಾಬಾದ್: ಬ್ಯಾಡ್ಮಿಂಟನ್ ಆಡುತ್ತಲೇ ಆಟಗಾರನೊಬ್ಬ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಧಾರುಣ ಘಟನೆ ಹೈದರಾಬಾದ್ ನಲ್ಲಿ ವರದಿಯಾಗಿದೆ.
ಹೈದರಾಬಾದ್ ನ ನಾಗೋಲ್ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುತ್ತಿದ್ದ ಗುಂಡ್ಲಾ ರಾಕೇಶ್ (25) ಎಂಬ ಯುವಕ ಹೃದಯಾಘಾತದಿಂದ ಸ್ಥಳದಲ್ಲೇ ಕುಸಿದು ಬಿದ್ದು ಪ್ರಜ್ಞಾಹೀನರಾದರು. ಕೂಡಲೇ ಅವರನ್ನು ಗಮನಿಸಿದ ಆಟಗಾರರು ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದುರು. ಆದರೆ ಯುವಕ ರಾಕೇಶ್ ಈಗಾಗಲೇ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ಮೂಲಗಳ ಪ್ರಕಾರ ಮೃತ ರಾಕೇಶ್ ಅವರನ್ನು ಖಮ್ಮಂ ಜಿಲ್ಲೆಯ ತಲ್ಲಡ ನಿವಾಸಿ ಎಂದು ಗುರುತಿಸಲಾಗಿದೆ. ಅವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮೃತ ವ್ಯಕ್ತಿ ಖಮ್ಮಂ ಜಿಲ್ಲೆಯ ತಲ್ಲಡದ ಮಾಜಿ ಉಪ ಸರಪಂಚ್ ಗುಂಡ್ಲಾ ವೆಂಕಟೇಶ್ವರಲು ಅವರ ಪುತ್ರ ಎಂದು ಹೇಳಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವಿಡಿಯೋ ವೈರಲ್
ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿದ್ದು, ಭಾನುವಾರ ರಾತ್ರಿ 8:00 ಗಂಟೆ ಸುಮಾರಿಗೆ ನಾಗೋಲ್ ಕ್ರೀಡಾಂಗಣದಲ್ಲಿ ನಡೆದ ಡಬಲ್ಸ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ರಾಕೇಶ್ ಭಾಗವಹಿಸಿದ್ದರು. ಈ ವೇಳೆ ರಾಕೇಶ್ ಶಟಲ್ ಕಾಕ್ ತೆಗೆದುಕೊಳ್ಳಲು ಬಾಗಿದ ಕೆಲವೇ ಕ್ಷಣಗಳಲ್ಲಿ, ಅವರು ಇದ್ದಕ್ಕಿದ್ದಂತೆ ಕೋರ್ಟ್‌ನಲ್ಲಿ ಕುಸಿದು ಬಿದ್ದಿದ್ದು ಕ್ಯಾಮೆರಾದಲ್ಲಿ ದಾಖಲಾಗಿದೆ.
Advertisement