Parliament Monsoon Session | ವಿರೋಧ ಪಕ್ಷಗಳ ಪ್ರತಿಭಟನೆ, ಉಭಯ ಸದನ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ

ಕೆಲವು ವಿರೋಧ ಪಕ್ಷದ ಸದಸ್ಯರು ಕೆಲವು ವಿಷಯಗಳನ್ನು ಎತ್ತಲು ಪ್ರಯತ್ನಿಸುತ್ತಾ ಸದನದ ಬಾವಿಗಿಳಿದು ಘೋಷಣೆಗಳನ್ನು ಕೂಗುತ್ತಿದ್ದರು.
Protest against SIR
ಎಸ್ ಐಆರ್ ವಿರುದ್ಧ ಪ್ರತಿಭಟನೆ
Updated on

ನವದೆಹಲಿ: ಗುರುವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ಸಂಸದರು ಹಲವು ಬೇಡಿಕೆಗಳ ಮೇಲೆ ಪ್ರತಿಭಟನೆ ನಡೆಸಿದ್ದರಿಂದ ಕಲಾಪ ಗದ್ದಲದಿಂದ ಆರಂಭವಾಯಿತು. ರಾಜ್ಯಸಭೆಯಲ್ಲಿ ಕೂಡ ಇದು ಪುನರಾವರ್ತನೆಯಾಗಿ ಉಭಯ ಸದನಗಳ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ.

ಬಿಹಾರದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ತುರ್ತು ಚರ್ಚೆ ನಡೆಸಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (DMK) ಸಂಸದ ತಿರುಚಿ ಶಿವ ಅವರು ರಾಜ್ಯಸಭೆಯಲ್ಲಿ ನಿಯಮ 267 ರ ಅಡಿಯಲ್ಲಿ ಕಲಾಪ ಅಮಾನತು ನೋಟಿಸ್ ಸಲ್ಲಿಸಿದರು.

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಇಂಡಿಯಾ ಬ್ಲಾಕ್ ಸದಸ್ಯರು ಸತತ 9ನೇ ದಿನವಾದ ಇಂದು ಕೂಡ ಸಂಸತ್ತಿನ ಸಂಕೀರ್ಣದಲ್ಲಿ ಪ್ರತಿಭಟನೆ ನಡೆಸಿದರು, ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಹಿಂಪಡೆಯುವಂತೆ ಒತ್ತಾಯಿಸಿದರು. ಆದಾಗ್ಯೂ, ರಾಜ್ಯಸಭೆಯು ಈ ವಿಷಯದ ಕುರಿತು ತುರ್ತು ಚರ್ಚೆಗಾಗಿ ನೋಟಿಸ್‌ಗಳನ್ನು ತೆಗೆದುಕೊಳ್ಳಲು ನಿರಾಕರಿಸಲಾಯಿತು.

Protest against SIR
ನೀವು PoK ಬಿಟ್ಟುಕೊಟ್ಟಿದ್ದೀರಿ, ಅದನ್ನು ವಾಪಸ್ ಪಡೆಯುವುದು ನಮ್ಮ ಕರ್ತವ್ಯ: ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ

ಬಿಹಾರದ ಚುನಾವಣಾ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಷಯದ ಕುರಿತು ವಿರೋಧ ಪಕ್ಷದ ಸದಸ್ಯರು ಗದ್ದಲ ಎಬ್ಬಿಸಿದ ನಂತರ ರಾಜ್ಯಸಭೆಯ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು.

ಇಂದು ಬೆಳಗ್ಗೆ ಒಂದು ಬಾರಿ ಮುಂದೂಡಿದ ನಂತರ ಮಧ್ಯಾಹ್ನ 12 ಗಂಟೆಗೆ ಸದನ ಸಭೆ ಸೇರಿದ ಕೂಡಲೇ, ವಿರೋಧ ಪಕ್ಷದ ಸದಸ್ಯರು ಬಿಹಾರದ ಚುನಾವಣಾ ಪಟ್ಟಿಯ SIR ಕುರಿತು ಚರ್ಚೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯನ್ನು ಸದನದಲ್ಲಿ ಚರ್ಚಿಸಬೇಕೆಂದು ಸಂಸದರು ಒತ್ತಾಯಿಸಿದರು. ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್, ಇತರ ವಿರೋಧ ಪಕ್ಷದ ನಾಯಕರು ಎಸ್‌ಐಆರ್ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

Protest against SIR
'Trump ಸುಳ್ಳು ಹೇಳುತ್ತಿದ್ದಾರೆ' ಎಂದು ಪ್ರಧಾನಿ ಮೋದಿ ಹೇಳಲು ಸಾಧ್ಯವಿಲ್ಲ, ಏಕೆಂದರೆ US ಅಧ್ಯಕ್ಷರು ಸತ್ಯ ಬಯಲು ಮಾಡ್ತಾರೆ: Rahul Gandhi

ಲೋಕಸಭೆ ಕಲಾಪ

ವಿವಿಧ ವಿಷಯಗಳ ಕುರಿತು ವಿರೋಧ ಪಕ್ಷದ ಸದಸ್ಯರು ನಡೆಸಿದ ಪ್ರತಿಭಟನೆಯ ನಂತರ ಇಂದು ಮಧ್ಯಾಹ್ನ 2 ಗಂಟೆಯವರೆಗೆ ಲೋಕಸಭೆಯ ಕಲಾಪವನ್ನು ಮುಂದೂಡಲಾಯಿತು. ಕೆಲವು ವಿರೋಧ ಪಕ್ಷದ ಸದಸ್ಯರು ಕೆಲವು ವಿಷಯಗಳನ್ನು ಎತ್ತಲು ಪ್ರಯತ್ನಿಸುತ್ತಾ ಸದನದ ಬಾವಿಗಿಳಿದು ಘೋಷಣೆಗಳನ್ನು ಕೂಗುತ್ತಿದ್ದರು.

ಸ್ಪೀಕರ್ ಓಂ ಬಿರ್ಲಾ ಪ್ರತಿಭಟನಾ ನಿರತ ಸದಸ್ಯರು ಘೋಷಣೆಗಳನ್ನು ಕೂಗುವುದನ್ನು ನಿಲ್ಲಿಸಿ ತಮ್ಮ ಸ್ಥಾನಗಳಿಗೆ ಹಿಂತಿರುಗುವಂತೆ ಒತ್ತಾಯಿಸಿದರು. ನೀವು ಸಮಸ್ಯೆಗಳನ್ನು ಚರ್ಚಿಸಲು ಬಯಸುವುದಿಲ್ಲವೇ, ನಿಮ್ಮನ್ನು ಸದನದಲ್ಲಿ ಘೋಷಣೆಗಳನ್ನು ಕೂಗಲು ಕಳುಹಿಸಿದ್ದಾರೆಯೇ ಎಂದು ಕೇಳಿದರು.

ಸದನವು ಸಮಸ್ಯೆಗಳನ್ನು ಚರ್ಚಿಸುವುದಕ್ಕಾಗಿ ಇದೆ, ಸದಸ್ಯರ ನಡವಳಿಕೆ ಸೂಕ್ತವಲ್ಲ ಎಂದು ಓಂ ಬಿರ್ಲಾ ಮಧ್ಯಾಹ್ನ 2 ಗಂಟೆಯವರೆಗೆ ಕಲಾಪವನ್ನು ಮುಂದೂಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com