ಕೊಲೆ ಪ್ರಕರಣ: RSS ಮಾಜಿ ಪ್ರಚಾರಕ ಉತ್ತಮ್ ಗಿರಿಗೆ ಜೀವಾವಧಿ ಶಿಕ್ಷೆ

ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶೆ ರೂಪ ಗುಪ್ತಾ ಅವರು, ಅವಧೇಶಾನಂದ ಮಹಾರಾಜ್ ಅವರನ್ನು ಕ್ರೂರವಾಗಿ ಕೊಲೆ ಮಾಡಿದ ಉತ್ತಮ ಗಿರಿ(30) ತಪ್ಪಿತಸ್ಥರೆಂದು ಘೋಷಿಸಿ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು.
RSS ex-functionary gets life in 2018 murder case
ಸಾಂದರ್ಭಿಕ ಚಿತ್ರ
Updated on

ಸಿರೋಹಿ: 2018 ರಲ್ಲಿ ಏಕಲ್ ವಿದ್ಯಾಲಯದ ಪೋಷಕ ಅವಧೇಶಾನಂದ ಮಹಾರಾಜ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಸಿರೋಹಿ ಜಿಲ್ಲೆಯ ಸೆಷನ್ಸ್ ನ್ಯಾಯಾಲಯ ಬುಧವಾರ ಆರ್‌ಎಸ್‌ಎಸ್ ಮಾಜಿ ಪ್ರಚಾರಕ ಉತ್ತಮ್ ಗಿರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶೆ ರೂಪ ಗುಪ್ತಾ ಅವರು, ಅವಧೇಶಾನಂದ ಮಹಾರಾಜ್ ಅವರನ್ನು ಕ್ರೂರವಾಗಿ ಕೊಲೆ ಮಾಡಿದ ಉತ್ತಮ ಗಿರಿ(30) ತಪ್ಪಿತಸ್ಥರೆಂದು ಘೋಷಿಸಿ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು.

ನ್ಯಾಯಾಲಯದ ಆದೇಶದ ಪ್ರಕಾರ, ಪ್ರಕರಣದ ಪುರಾವೆಗಳು ಅಪರಾಧಿ ಅವಧೇಶಾನಂದ ಮಹಾರಾಜ್ ಅವರನ್ನು ವೈಯಕ್ತಿಕ ದ್ವೇಷದ ಕಾರಣ 30 ರಿಂದ 40 ಬಾರಿ ಚಾಕುವಿನಿಂದ ಇರಿದು ಕ್ರೂರವಾಗಿ ಕೊಲೆ ಮಾಡಲಾಗಿದೆ.

RSS ex-functionary gets life in 2018 murder case
2008 ಮಾಲೆಗಾಂವ್ ಸ್ಫೋಟ ಪ್ರಕರಣ: BJP ಮಾಜಿ ಸಂಸದೆ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಸೇರಿ 7 ಆರೋಪಿಗಳು ಖುಲಾಸೆ

ಕೊಲೆ ಮಾಡಿದ ಕ್ರೂರ ವಿಧಾನವನ್ನು ಗಮನಿಸಿದರೆ, ಅಪರಾಧಿಗೆ ಶಿಕ್ಷೆಯಲ್ಲಿ ಯಾವುದೇ ಸಡಿಲಿಕೆ ಸಮರ್ಥನೀಯವಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಸಿರೋಹಿಯ ಮಾಜಿ ಶಾಸಕ ಸನ್ಯಾಮ್ ಲೋಧಾ ಅವರು ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿದ್ದಾರೆ.

"ಆರ್‌ಎಸ್‌ಎಸ್‌ನ 100 ವರ್ಷಗಳ ಆಚರಣೆಯು ನ್ಯಾಯದೊಂದಿಗೆ ಪ್ರಾರಂಭವಾಗಿದೆ. ಆರ್‌ಎಸ್‌ಎಸ್ ಕಚೇರಿಯಲ್ಲಿ ಅವಧೇಶಾನಂದಜಿ ಅವರನ್ನು ಕೋಲು ಮತ್ತು ಚಾಕುವಿನಿಂದ ಕ್ರೂರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪ್ರಚಾರಕ್ ಉತ್ತಮ್ ಗಿರಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ ಎಂದು ಲೋಧಾ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com